AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ: ಪುತ್ತೂರಿನಲ್ಲಿ ಕಾಂಗ್ರೆಸ್-ಬಿಜೆಪಿ ವಾಕ್ಸಮರ

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ: ಪುತ್ತೂರಿನಲ್ಲಿ ಕಾಂಗ್ರೆಸ್-ಬಿಜೆಪಿ ವಾಕ್ಸಮರ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Oct 07, 2026 | 4:12 PM

Share

ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ದಕ್ಷಿಣ ಕನ್ನಡದಲ್ಲಿ ರಾಜಕೀಯ ಸಮರ ತೀವ್ರಗೊಂಡಿದೆ. ಮುಸ್ಲಿಂ ಮತದಾರರನ್ನು ಪಟ್ಟಿಯಿಂದ ಕೈಬಿಡಲು ಬಿಜೆಪಿ ಲೆಟರ್‌ಹೆಡ್‌ನಲ್ಲಿ ಶಿಫಾರಸು ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. BLOಗಳ ವರದಿ ಆಧಾರದ ಮೇಲೆ ಅಂತಿಮ ನಿರ್ಧಾರ ಚುನಾವಣಾಧಿಕಾರಿಗಳಿಂದ ಆಗುತ್ತದೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.

ಮಂಗಳೂರು, ಅ.7: ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ರಾಜಕೀಯ ಸಮರ ಶುರುವಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಮುಸ್ಲಿಂ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ಬಿಜೆಪಿ ಲೆಟರ್‌ಹೆಡ್‌ನಲ್ಲಿ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಆರೋಪಿಸಿದೆ. ಬಿಎಲ್‌ಒ ಗಳು ವಾಸ್ತವ್ಯ ಇರುವವರನ್ನೂ ವಾಸ್ತವ್ಯ ಇಲ್ಲ ಎಂದು ವರದಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿಗೆ ದೂರು ನೀಡಿರುವ ಕಾಂಗ್ರೆಸ್, ಬಿಎಲ್‌ಒಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದೆ. ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಎಲ್‌ಒಗಳಿಗೆ ಅನುಮಾನ ವ್ಯಕ್ತಪಡಿಸುವ ಅಧಿಕಾರವಿದೆ. ಮತದಾರರು ವಾಸ್ತವ್ಯ ಇಲ್ಲದಿರುವುದು, ಮರಣ ಹೊಂದಿರುವಿಕೆ, ವಿದೇಶ ಪ್ರವಾಸ, ಅಥವಾ ಎರಡೆರಡು ಕಡೆ ಮತ ಹೊಂದಿರುವುದನ್ನು ಗಮನಿಸಿ ವರದಿ ಮಾಡಬಹುದು ಎಂದು ಸ್ಪಷ್ಟಪಡಿಸಿದ್ದಾರೆ. ಬಿಎಲ್‌ಒಗಳು ಬಿಜೆಪಿ ಕಾರ್ಯಕರ್ತರಾಗಿರುವುದರಿಂದ ಬಿಜೆಪಿ ಲೆಟರ್‌ಹೆಡ್ ಬಳಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಅಂತಿಮವಾಗಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ನಿರ್ಧಾರವನ್ನು ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ ನಂತರವೇ ಮಾಡುತ್ತಾರೆ ಎಂದು ಬಿಜೆಪಿ ಪ್ರತಿಪಾದಿಸಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More