ಉಳ್ಳಾಲದಲ್ಲಿ ವಿದ್ಯುತ್​​ ತಂತಿ ತಗುಲಿ ಹೆಬ್ಬಾವು ಸಾವು, ಆತ್ಮಹತ್ಯೆ ಎಂದ ನೆಟ್ಟಿಗರು

Edited By:

Updated on: Jul 16, 2024 | 9:59 AM

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವು ವಿದ್ಯುತ್​ ತಂತಿ ತಗುಲಿ ಮೃತಪಟ್ಟಿದೆ. ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಬ್ಬಾವು ಆತ್ಮಹತ್ಯೆ ಎಂಬ ತಲೆ ಬರಹದಡಿ ವಿಡಿಯೋ ವೈರಲ್ ಆಗುತ್ತಿದೆ.

ವಿದ್ಯುತ್​ ತಂತಿ ತಗುಲಿ ಆನೆಗಳು ಮೃತಪಟ್ಟ ಘಟನೆಗಳು ಸಂಭವಿಸಿವೆ. ಆದರೆ ಇದೀಗ ವಿದ್ಯುತ್​ ತಂತಿ ತಗುಲಿ ಹೆಬ್ಬಾವು (Python) ಸಾವಿಗೀಡಾಗಿದೆ. ದಕ್ಷಿಣ ಕನ್ನಡ (Dakshin Kannada) ಜಿಲ್ಲೆಯ ಉಳ್ಳಾಲ (Ullal) ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವು ಬೀದಿ ಬದಿಯ ವಿದ್ಯುತ್ ಕಂಬ ಏರಿತ್ತು. ವಿದ್ಯುತ್​ ತಂತಿ ತಗುಲಿ ಶಾಕ್​ನಿಂದ ಹೆಬ್ಬಾವು ಮೃತಪಟ್ಟಿದೆ. ಹೆಬ್ಬಾವು ವಿದ್ಯುತ್ ತಂತಿಯ ಮೇಲೆ ನೇತಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಬ್ಬಾವು ಆತ್ಮಹತ್ಯೆ ಎಂಬ ತಲೆ ಬರಹದಡಿ ವಿಡಿಯೋ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಜಿಟಿ ಜಿಟಿ ಮಳೆ, ಮಂಜು ಬೆಂಗಳೂರು ನಗರ ಕಂಡಿದ್ದು ಹೀಗೆ, ಇಲ್ಲಿದೆ ಫೋಟೋಸ್​

Published on: Jul 16, 2024 09:54 AM
Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More