ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ಯೋಚಿಸುತ್ತಿಲ್ಲವಾದ್ದರಿಂದ ಆ ಪ್ರಶ್ನೆಯೇ ಅಪ್ರಸ್ತುತ: ಡಿಕೆ ಸುರೇಶ್
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ, ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಆರಿಸುತ್ತದೆ, ವರಿಷ್ಠರು ಅದರ ಬಗ್ಗೆ ಪ್ರಸ್ತಾಪವನ್ನೇ ಮಾಡಿಲ್ಲ ಅಂತಾದ ಮೇಲೆ ಸಿಎಂ ಬದಲಾವಣೆ ಮಾತು ಅಪ್ರಸ್ತುತವೆನಿಸುತ್ತದೆ ಎಂದು ಸುರೇಶ್ ಹೇಳಿದರು. ಸಿದ್ದರಾಮಯ್ಯನೇ 5 ವರ್ಷ ಸಿಎಂ ಅಗಿರುತ್ತಾರೆ ಅಂತ ಸಚಿವರೊಬ್ಬರು ಹೇಳಿದ್ದಾರೆ ನಿನ್ನೆ ಡಿಕೆ ಶಿವಕುಮಾರ್ಗೆ ಹೇಳಿದಾಗ ಅವರು ಪ್ರತಿಕ್ರಿಯೆ ನೀಡದೆ ಹೋಗಿದ್ದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಮತ್ತು ಅದು ಎಐಸಿಸಿ ವಿವೇಚನೆಗೆ ಬಿಟ್ಟ ವಿಚಾರ, ವರಿಷ್ಠರು ತೆಗೆದುಕೊಳ್ಳುವ ನಿರ್ಣಯಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು. ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ತಾನು ಆಕಾಂಕ್ಷಿಯಲ್ಲ ಎನ್ನುವ ಸುರೇಶ್ ಅವರಿಗೆ, ಪಕ್ಷದ ಹೈಕಮಾಂಡ್ ಆ ಜವಾಬ್ದಾರಿಯನ್ನು ವಹಿಸಿಕೊಟ್ಟರೆ ಅಂಗೀಕರಿಸುತ್ತೀರಾ ಎಂದು ಕೇಳಿದಾಗ, ಜನ ತನಗೆ ವಿಶ್ರಾಂತಿ ನೀಡಿದ್ದಾರೆ ತಾನೀಗ ರೆಸ್ಟ್ನಲ್ಲಿದ್ದೇನೆ ಎಂದು ಹೇಳುತ್ತಾರೆ. ರಾಜ್ಯದಲ್ಲಿ ಹೆಚ್ಚಿನ ತೆರಿಗೆ ಸಂಗ್ರಹವಾಗುತ್ತಿರುವ ಕಾರಣಕ್ಕೆ ಕರ್ನಾಟಕ ಸರ್ಕಾರ ಹೆಚ್ಚಿನ ಪಾಲು ಕೇಳುತ್ತಿರುವುದು ಸಣ್ಣತನ ಎಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸುರೇಶ್, ಅದು ಸಣ್ಣತನವಲ್ಲ, ರಾಜ್ಯ ಸರ್ಕಾರಗಳ ಆರ್ಥಿಕ ಶಕ್ತಿಯನ್ನು ಕುಂದಿಸುವ ಪ್ರಯತ್ನ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚಿನ್ನ ವಂಚನೆ ಕೇಸ್! ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು