ಹೆಚ್ಚುವರಿ ಡಿಸಿಎಂಗಳ ಕೂಗು ಬಲವಾಗುತ್ತಿದೆಯಲ್ಲ ಅಂದಾಗ ಸುರ್ಜೇವಾಲಾರನ್ನೇ ಕೇಳಿ ಅಂತ ಸಿಡುಕಿದ ಶಿವಕುಮಾರ್!
ಜಿಲ್ಲಾಮಟ್ಟದಲ್ಲಿ, ವಿಧಾನ ಸಭಾ ಕ್ಷೇತ್ರಗಳಲ್ಲಿ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನ, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಗಳನ್ನು ನಡೆಸುವ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದ್ದು ಕಾರ್ಯಕರ್ತರಿಗೆ ಕೆಲ ಸಲಹೆಗಳನ್ನು ಸಭೆಯಲ್ಲಿ ನೀಡಲಾಗುವುದು ಎಂದು ಶಿವಕುಮಾರ್ ಹೇಳಿದರು.
ಬೆಂಗಳೂರು: ಎನ್ ಡಿಎ (NDA) ಮತ್ತು ಇಂಡಿಯ ಮೈತ್ರಿಕೂಟಗಳ (INDIA alliance) ಪ್ರಮುಖ ಪಕ್ಷಗಳಾಗಿರುವ ಬಿಜೆಪಿ ಮತ್ತು ಕಾಂಗ್ರೆಸ್ ಲೋಕಸಭಾ ಚುನಾವಣೆಯ ಸಿದ್ಧತೆಗಳನ್ನು ಒಟ್ಟಿಗೆ ಶುರುಮಾಡಿಕೊಂಡಂತಿದೆ. ಅತ್ತ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಯುತ್ತಿದ್ದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಪಕ್ಷದ ಜಿಲ್ಲಾ ಮುಖಂಡರು ಮತ್ತು ಪದಾಧಿಕಾರಿಗಳ ಸಭೆ ಕರೆದಿದ್ದಾರೆ. ಸಭೆ ಆರಂಭವಾಗುವ ಮೊದಲು ಬ್ರೀಫ್ ಆಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಶಿವಕುಮಾರ್, ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ತಯಾರಿಗಳನ್ನು ಚರ್ಚಿಸಲು ಮತ್ತು ರೂಪುರೇಷೆಗಳನ್ನು ಸಿದ್ಧಮಾಡಿಕೊಳ್ಳಲು ಸಭೆ ಕರೆಯಲಾಗಿದೆ ಎಂದರು. ಜಿಲ್ಲಾಮಟ್ಟದಲ್ಲಿ, ವಿಧಾನ ಸಭಾ ಕ್ಷೇತ್ರಗಳಲ್ಲಿ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನ, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಗಳನ್ನು ನಡೆಸುವ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದ್ದು ಕಾರ್ಯಕರ್ತರಿಗೆ ಕೆಲ ಸಲಹೆಗಳನ್ನು ಸಭೆಯಲ್ಲಿ ನೀಡಲಾಗುವುದು ಎಂದು ಶಿವಕುಮಾರ್ ಹೇಳಿದರು. ಕೆಲ ಮಂತ್ರಿಗಳು ಹೆಚ್ಚುವರಿ ಡಿಸಿಎಂಗಳನ್ನು ನೇಮಕ ಮಾಡುವ ಬಗ್ಗೆ ಹೈಕಮಾಂಡ್ ಮೇಲೆ ಸತತವಾಗಿ ಒತ್ತಡ ಹೇರುತ್ತಿರುವ ಬಗ್ಗೆ ಪ್ರಶ್ನೆ ಕೇಳಿದಾಗ ಸಿಡುಕಿದ ಶಿವಕುಮಾರ್ ಅದನ್ನು ಸುರ್ಜೇವಾಲಾ ಸಾಹೇಬರನ್ನೇ ಕೇಳಿ ಅಂದರು!
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ