ಡಿಕಾಕ್ ಸಿಡಿಲಬ್ಬರ… ಸನ್ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
Sunrisers Eastern Cape vs Pretoria Capitals: ಈ ಭರ್ಜರಿ ಗೆಲುವಿನೊಂದಿಗೆ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಬೋನಸ್ ಪಾಯಿಂಟ್ ಪಡೆದುಕೊಂಡಿದೆ. ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ 1.25 ಕ್ಕಿಂತ ಹೆಚ್ಚಿನ ರನ್ ರೇಟ್ ವ್ಯತ್ಯಾಸದಲ್ಲಿ ಗೆಲ್ಲುವ ತಂಡಕ್ಕೆ ಹೆಚ್ಚುವರಿ ಒಂದು ಅಂಕಗಳನ್ನು ನೀಡಲಾಗುತ್ತದೆ. ಅದರಂತೆ ಪ್ರಿಟೋರಿಯ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಒಟ್ಟು 5 ಅಂಕಗಳನ್ನು ಪಡೆದುಕೊಂಡಿದೆ.
ಸೌತ್ ಆಫ್ರಿಕಾ ಟಿ20 ಲೀಗ್ನ 5ನೇ ಪಂದ್ಯದಲ್ಲಿ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಭರ್ಜರಿ ಜಯ ಸಾಧಿಸಿದೆ. ಗೆಬೆಹಾದಲ್ಲಿ ಸೇಂಟ್ ಜಾರ್ಜ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪ್ರಿಟೋರಿಯ ಕ್ಯಾಪಿಟಲ್ಸ್ ಹಾಗೂ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಕ್ವಿಂಟನ್ ಡಿಕಾಕ್ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 77 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್ಗಳಲ್ಲಿ 188 ರನ್ ಕಲೆಹಾಕಿತು.
189 ರನ್ಗಳ ಗುರಿ ಬೆನ್ನತ್ತಿದ ಪ್ರಿಟೋರಿಯ ಕ್ಯಾಪಿಟಲ್ಸ್ ತಂಡವು 18 ಓವರ್ಗಳಲ್ಲಿ 140 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 48 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಭರ್ಜರಿ ಗೆಲುವಿನೊಂದಿಗೆ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಬೋನಸ್ ಪಾಯಿಂಟ್ ಪಡೆದುಕೊಂಡಿದೆ. ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ 1.25 ಕ್ಕಿಂತ ಹೆಚ್ಚಿನ ರನ್ ರೇಟ್ ವ್ಯತ್ಯಾಸದಲ್ಲಿ ಗೆಲ್ಲುವ ತಂಡಕ್ಕೆ ಹೆಚ್ಚುವರಿ ಒಂದು ಅಂಕಗಳನ್ನು ನೀಡಲಾಗುತ್ತದೆ. ಅದರಂತೆ ಪ್ರಿಟೋರಿಯ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು ಒಟ್ಟು 5 ಅಂಕಗಳನ್ನು ಪಡೆದುಕೊಂಡಿದೆ.
