ರಾಮನಗರ: ಪ್ರಚಾರದ ವೇಳೆ ಒಂದೇ ಗುಟುಕಿನಲ್ಲಿ ಎಳನೀರು ಕುಡಿದ ಆರ್​.ಅಶೋಕ್​

Updated on: Apr 23, 2023 | 3:17 PM

ಕನಕಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರ್​.ಆಶೋಕ್​ ಇಂದು ಅಬ್ಬರದ ಮತಯಾಚನೆ ನಡೆಸಿದರು. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಓರ್ವ ಬೆಂಬಲಿಗ ಕೊಟ್ಟ ಎಳನೀರನ್ನು ಒಂದೇ ಗುಟುಕಿನಲ್ಲಿ ಕುಡಿದರು.

ರಾಮನಗರ: ಕನಕಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರ್​.ಆಶೋಕ್​ ಇಂದು ಅಬ್ಬರದ ಮತಯಾಚನೆ ನಡೆಸಿದರು. ಕನಕಪುರ ತಾಲೂಕಿನ ಟಿ.ಬೇಕುಪ್ಪೆ ಗ್ರಾಮದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಓರ್ವ ಬೆಂಬಲಿಗ ಕೊಟ್ಟ ಎಳನೀರನ್ನು ಒಂದೇ ಗುಟುಕಿನಲ್ಲಿ ಕುಡಿದರು. ಇನ್ನು ಕನಕಪುರ ಕ್ಷೇತ್ರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರ ಭದ್ರಕೋಟೆಯಾಗಿದೆ. ಈ ಕೋಟೆಯನ್ನು ಛಿದ್ರ ಮಾಡಲು ಸಾಮ್ರಾಟ್​ ಅಶೋಕ್​ ಎಂಟ್ರಿಕೊಟ್ಟಿದ್ದು, ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.

Published on: Apr 23, 2023 03:16 PM
Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More