ಬಣ ಬಡಿದಾಟಕ್ಕೆ ಬ್ರೇಕ್ ಬೀಳುತ್ತಾ? ನಡ್ಡಾ ಭೇಟಿ ಬಳಿಕ ಅಶೋಕ್ ಮಹತ್ವದ ಸುಳಿವು
ವಿಪಕ್ಷ ನಾಯಕರ ಆರ್ ಅಶೋಕ್ ಅವರು ಇಂದು (ಡಿಸೆಂಬರ್ 04) ದೆಹಲಿಗೆ ತೆರಳಿದ್ದು, ಅಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ನವದೆಹಲಿ, (ಡಿಸೆಂಬರ್ 04): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಬುಲಾವ್ ಮೇರೆಗೆ ವಿಪಕ್ಷ ನಾಯಕರ ಆರ್ ಅಶೊಕ್ ದೆಹಲಿಗೆ ತೆರಳಿದ್ದು, ಏರ್ಪೋರ್ಟ್ನಿಂದ ನೇರವಾಗಿ ಸಂಸತ್ಗೆ ತೆರಳಿ ನಡ್ಡಾ ಅವರನ್ನ ಭೇಟಿ ಮಾಡಿದ್ದಾರೆ. ಹೀಗಾಗಿ ನಡ್ಡಾ ಅವರು ಅಶೋಕ್ ಅವರನ್ನು ಕರೆಯಿಸಿಕೊಂಡು ಮಾತುಕತೆ ನಡೆಸಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ನಡ್ಡಾ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅಶೋಕ್, ಯತ್ನಾಳ್ ವಿಚಾರ ಹೈಕಮಾಂಡ್ ಅಂಗಳದಲ್ಲಿದೆ. ಅದು ಸುಖ್ಯಾಂತವಾಗಲಿದೆ. ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ಪಾಲಿಸುವುದು ನನ್ನ ಕೆಲಸ. ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳುತ್ತೆ ಎಂದು ವಿಶ್ವಾಸ ವ್ಯಕ್ತಪಪಡಿಸಿದರು. ಈ ಮೂಲಕ ಪರೋಕ್ಷವಾಗಿ ಹೈಕಮಾಂಡ್ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತಕ್ಕೆ ಕಡಿವಾಣ ಹಾಕಲಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.