ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದ ಆರ್ ಅಶೋಕ್!

Updated on: Jun 22, 2026 | 1:19 PM

ಭಾನುವಾರ ನಡೆದ ನೀಟ್ ಮರು ಪರೀಕ್ಷೆಗೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯಿಂದಾಗಿ ಮೂವರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲು ಸಾಧ್ಯವಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಆರ್.ಸಿ ಕಾಲೇಜಿನಲ್ಲಿ ನಡೆದ ಈ ಘಟನೆಗೆ ಪೋಷಕರು ಸಂಚಾರ ದಟ್ಟಣೆಯೇ ಕಾರಣವೆಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಮೇಲೆ ಬಿಜೆಪಿ ನಾಯಕ ಆರ್.ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, ಜೂನ್ 22: ಭಾನುವಾರ ನಡೆದ ನೀಟ್ ಮರು ಪರೀಕ್ಷೆಗೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯಿಂದಾಗಿ ಮೂವರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲು ಸಾಧ್ಯವಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಆರ್.ಸಿ ಕಾಲೇಜಿನಲ್ಲಿ ನಡೆದ ಈ ಘಟನೆಗೆ ಪೋಷಕರು ಸಂಚಾರ ದಟ್ಟಣೆಯೇ ಕಾರಣವೆಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಮೇಲೆ ಬಿಜೆಪಿ ನಾಯಕ ಆರ್.ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನೀಟ್ ಪರೀಕ್ಷೆ ನಡೆಯುತ್ತಿದ್ದ ದಿನವೇ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿ ಕಾಂಗ್ರೆಸ್ ಪಕ್ಷ ಸಭೆ ನಡೆಸಿದ್ದು, ಇದರಿಂದ ಉಂಟಾದ ಸಂಚಾರ ದಟ್ಟಣೆಯೇ ವಿದ್ಯಾರ್ಥಿಗಳಿಗೆ ತೊಂದರೆಯಾಗಲು ಕಾರಣ ಎಂದು ಅಶೋಕ್ ಆರೋಪಿಸಿದ್ದಾರೆ. ಕಾರ್ಯಕ್ರಮದ ಸಮಯವನ್ನು ಬದಲಿಸಿದ್ದರೆ ಈ ಸಮಸ್ಯೆ ಉಂಟಾಗುತ್ತಿರಲಿಲ್ಲ ಎಂದಿದ್ದಾರೆ. ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಮಾನ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾದ ಉದಾಹರಣೆಯನ್ನು ನೀಡಿದ ಆರ್.ಅಶೋಕ್, ಕಾಂಗ್ರೆಸ್ ನಾಯಕರಿಗೆ ಈ ಜ್ಞಾನ ಮತ್ತು ಸಾಮಾನ್ಯ ತಿಳುವಳಿಕೆ ಇರಲಿಲ್ಲ ಎಂದು ಟೀಕಿಸಿದ್ದಾರೆ. ಈ ಸಮಸ್ಯೆಗೆ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರವೇ ನೇರ ಹೊಣೆ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More