ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ

Edited By:

Updated on: Jul 11, 2026 | 5:30 PM

ಮುಖ್ಯಾಂಶಗಳು

  • ಬಾಂಗ್ಲಾ ವಲಸಿಗರಿಗೆ ಮತದಾನದ ಹಕ್ಕು ಕೊಡಲು ಸರ್ಕಾರ ಮುಂದಾಗಿದೆ
  • ಶಾಶ್ವತ ವಾಸ ದೃಢೀಕರಣ ಪತ್ರ ಕೊಡುವ ಹಕ್ಕು ರಾಜ್ಯ ಸರ್ಕಾರಕ್ಕಿಲ್ಲ
  • ಸರ್ಕಾರ ಶಾಶ್ವತ ವಾಸ ದೃಢೀಕರಣ ಪತ್ರ ಆದೇಶ ರದ್ದು ಮಾಡಬೇಕು

ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಸರ್ಕಾರದ ಆದೇಶಕ್ಕೆ ಆರ್. ಅಶೋಕ್​ ವಿರೋಧಿಸಿದ್ದಾರೆ. ಈ ಆದೇಶವು ಸಂವಿಧಾನದ ಉಲ್ಲಂಘನೆಯಾಗಿದ್ದು, ಕೇಂದ್ರ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಸೇರಿದೆ ಎಂದು ಅವರು ಆರೋಪಿಸಿದ್ದಾರೆ. ವಿದೇಶಿಯರಿಗೆ ಪೌರತ್ವ ನೀಡುವ ಹುನ್ನಾರ ಇದಾಗಿದೆ ಎಂದು ಹೇಳಿರುವ ಅಶೋಕ್, ಕೂಡಲೇ ಆದೇಶ ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಮೈಸೂರು, ಜುಲೈ 11: ರಾಜ್ಯದಲ್ಲಿ ಸರ್ಕಾರದಿಂದ ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆ ವಿಚಾರ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘‘ಈ ಆದೇಶವು ಸಂವಿಧಾನದ ಉಲ್ಲಂಘನೆಯಾಗಿದ್ದು, ಕೂಡಲೇ ಅದನ್ನು ವಾಪಸ್ ಪಡೆಯುವಂತೆ’’ ಆಗ್ರಹಿಸಿದ್ದಾರೆ. ನಗರದಲ್ಲಿ ನಡೆದ ಕಾಯಕ ಸಮುದಾಯಗಳ ಸಭೆಯಲ್ಲಿ ಮಾತನಾಡಿದ ಅವರು, ‘‘ಶಾಶ್ವತ ನಿವಾಸ ಪ್ರಮಾಣಪತ್ರ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ. ಪೌರತ್ವವನ್ನು ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಸೇರಿದ್ದು. ಪ್ರಸ್ತುತ ಆದೇಶವು 10 ವರ್ಷಗಳ ಕಾಲ ರಾಜ್ಯದಲ್ಲಿ ವಾಸಿಸಿದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಅವಕಾಶ ಕಲ್ಪಿಸಿದ್ದು, ಇದು ವಿದೇಶಿಯರಿಗೆ, ವಿಶೇಷವಾಗಿ ಬಾಂಗ್ಲಾದೇಶದವರಿಗೆ ನೆರವಾಗುವ ಹುನ್ನಾರ’’ ಎಂದು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More