ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ರಾಜ್ಯ ಬಿಜೆಪಿ ನಾಯಕ ಆರ್. ಅಶೋಕ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ. ಕರ್ನಾಟಕದ ಇತ್ತೀಚಿನ ರಾಜಕೀಯ ವಿದ್ಯಮಾನಗಳು, ಅದರಲ್ಲೂ ಮುಖ್ಯವಾಗಿ ಸಚಿವ ನಾಗೇಂದ್ರ ಅವರ ಭ್ರಷ್ಟಾಚಾರ ಆರೋಪದ ರಾಜೀನಾಮೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಅಶೋಕ್ ತಿಳಿಸಿದ್ದಾರೆ. ನಾಳೆ ಮಧ್ಯಾಹ್ನ 12:20ಕ್ಕೆ ಈ ಭೇಟಿ ನಿಗದಿಯಾಗಿದೆ.
ದೆಹಲಿ, ಅಕ್ಟೋಬರ್ 22: ದೆಹಲಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಆರ್.ಅಶೋಕ್ ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಆರ್ ಅಶೋಕ್ರ ಈ ನಡೆ ಸದ್ಯ ಕುತೂಹಲ ಮೂಡಿಸಿದೆ. ಈ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾಳೆ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ. ನಾಳೆ ಮಧ್ಯಾಹ್ನ 12.30ಕ್ಕೆ ಸಮಯಾವಕಾಶ ನೀಡಿದ್ದಾರೆ. ರಾಜ್ಯದ ವಿದ್ಯಮಾನಗಳ ಕುರಿತು ಚರ್ಚೆ ಮಾಡಲಿದ್ದೇನೆ’ ಎಂದು ಮಾಹಿತಿ ನೀಡಿದ್ದಾರೆ. ‘ಸ್ಟಿಂಗ್ ಆಪರೇಷನ್ ಬಗ್ಗೆ ಕೇಳಿದರೆ ಮಾಹಿತಿ ನೀಡುತ್ತೇನೆ, ನಾಗೇಂದ್ರ ರಾಜೀನಾಮೆ ಬಗ್ಗೆಯೂ ಮಾಹಿತಿ ನೀಡುತ್ತೇನೆ’ ಎಂದು ಅವರು ಹೇಳಿದ್ದಾರೆ.
ವರದಿ: ನಟರಾಜ್
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 22, 2026 10:20 PM
Loading...
Unable to load recommendations.
Follow Us
