AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL ಪಂದ್ಯದ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಅಶೋಕ್​​ ಎಚ್ಚರಿಕೆ: ವಿಪಕ್ಷ ನಾಯಕ ಹೇಳಿದ್ದೇನು?

IPL ಪಂದ್ಯದ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಅಶೋಕ್​​ ಎಚ್ಚರಿಕೆ: ವಿಪಕ್ಷ ನಾಯಕ ಹೇಳಿದ್ದೇನು?

Anil Kalkere
| Edited By: |

Updated on: Mar 27, 2026 | 3:35 PM

Share

ವಿಧಾನಸೌಧದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಹಿಂದಿನ ಐಪಿಎಲ್ ಪಂದ್ಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಮಾಯಕ ಮಕ್ಕಳು ಸಾವನ್ನಪ್ಪಿದ್ದನ್ನು ಉಲ್ಲೇಖಿಸಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಮುಂಬರುವ ಪಂದ್ಯಗಳ ಸುರಕ್ಷತೆ ಖಚಿತಪಡಿಸುವಂತೆ ಒತ್ತಾಯಿಸಿದರು. ಅಲ್ಲದೆ, ಐಪಿಎಲ್ ಟಿಕೆಟ್ ವಿತರಣೆಯಲ್ಲಿ ಸ್ಥಳೀಯ ಕ್ಲಬ್‌ಗಳು ಹಾಗೂ ಸಾಮಾನ್ಯ ಜನರಿಗೆ ಅವಕಾಶ ನೀಡುವಂತೆ ಸ್ಪೀಕರ್ ಹಾಗೂ ಇತರೆ ನಾಯಕರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

ಬೆಂಗಳೂರು, ಮಾರ್ಚ್​​ 27: ಐಪಿಎಲ್ ಪಂದ್ಯಗಳ ಸುರಕ್ಷತೆ ಮತ್ತು ಟಿಕೆಟ್ ವಿತರಣೆ ಕುರಿತು ರಾಜ್ಯ ಸರ್ಕಾರಕ್ಕೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ. ಹಿಂದಿನ ಐಪಿಎಲ್ ಪಂದ್ಯದ ಸಂದರ್ಭ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಮಾಯಕರು ಮೃತಪಟ್ಟಿದ್ದನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ಬೇಜವಾಬ್ದಾರಿ ಹಾಗೂ ಅಧಿಕಾರಿಗಳ ನಡೆ ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಅಲ್ಲದೆ ಮುಂಬರುವ ಐಪಿಎಲ್ ಪಂದ್ಯಗಳು ಸುಗಮವಾಗಿ ನಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ ರಾಜ್ಯ ಸರ್ಕಾರವೇ ನೇರ ಹೊಣೆಗಾರರಾಗಲಿದೆ ಎಂಬ ಎಚ್ಚರಿಕೆಯನ್ನೂ ಇದೇ ವೇಳೆ ನೀಡಿದ್ದಾರೆ. ಐಪಿಎಲ್ ಟಿಕೆಟ್ ಹಂಚಿಕೆ ಕುರಿತೂ ಮಾತನಾಡಿದ ಅಶೋಕ್, ತಮಗೆ ಬರುವ ಟಿಕೆಟ್‌ಗಳನ್ನು ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಸ್ಥಳೀಯ ಕ್ರಿಕೆಟ್ ಕ್ಲಬ್‌ಗಳು ಮತ್ತು ಸಾಮಾನ್ಯ ಜನರಿಗೆ ಟಿಕೆಟ್‌ಗಳು ಲಭ್ಯವಾಗುವಂತೆ ಮಾಡುವ ದೃಷ್ಟಿಯಿಂದ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು ಕನಿಷ್ಠ ಮೂರ್ನಾಲ್ಕು ಟಿಕೆಟ್‌ಗಳನ್ನು ಪಡೆಯುವ ವ್ಯವಸ್ಥೆಯಾಗಬೇಕೆಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us