ನಟಿ ಜಾಕ್ವೆಲಿನ್ ಫರ್ನಾಂಡಿಸ್ ಬಗ್ಗೆ ಕಿಚ್ಚ ಸುದೀಪ್ ಮೆಚ್ಚುಗೆಯ ಮಾತು

‘ರಾ ರಾ ರಕ್ಕಮ್ಮ’ ಹಾಡು ಸಖತ್ ಹಿಟ್ ಆಗಿದೆ. ಈ ಹಾಡಿನಿಂದ ಸುದೀಪ್ ಹಾಗೂ ಬಾಲಿವುಡ್​ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೆಮಿಸ್ಟ್ರಿ ಹೇಗಿರಲಿದೆ ಎನ್ನುವ ಸೂಚನೆ ಸಿಕ್ಕಿದೆ. ಅವರ ಜತೆ ಕೆಲಸ ಮಾಡಿದ್ದು ಹೇಗಿತ್ತು ಎನ್ನುವ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಅವರನ್ನು ಬಾಯ್ತುಂಬ ಹೊಗಳಿದ್ದಾರೆ.

TV9kannada Web Team

| Edited By: Rajesh Duggumane

May 27, 2022 | 2:15 PM

ಕಿಚ್ಚ ಸುದೀಪ್ (Kichcha Sudeep) ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona Movie) ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಚಿತ್ರತಂಡ ಬ್ಯುಸಿ ಆಗಿದೆ. ಇತ್ತೀಚೆಗೆ ಬಿಡುಗಡೆ ಆಗಿದ್ದ ‘ರಾ ರಾ ರಕ್ಕಮ್ಮ’ ಹಾಡು ಸಖತ್ ಹಿಟ್ ಆಗಿದೆ. ಈ ಹಾಡಿನಿಂದ ಸುದೀಪ್ ಹಾಗೂ ಬಾಲಿವುಡ್​ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಕೆಮಿಸ್ಟ್ರಿ ಹೇಗಿರಲಿದೆ ಎನ್ನುವ ಸೂಚನೆ ಸಿಕ್ಕಿದೆ. ಅವರ ಜತೆ ಕೆಲಸ ಮಾಡಿದ್ದು ಹೇಗಿತ್ತು ಎನ್ನುವ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ಅವರನ್ನು ಬಾಯ್ತುಂಬ ಹೊಗಳಿದ್ದಾರೆ. ಹಲವು ಹಿಂದಿ ಕಲಾವಿದರ ಜತೆ ಸುದೀಪ್ ನಟಿಸಿದ್ದಾರೆ. ಆದರೆ, ಜಾಕ್ವೆಲಿನ್ ಬೇರೆಯದೇ ರೀತಿಯ ನಟಿ ಎಂಬುದು ಸುದೀಪ್ ಅಭಿಪ್ರಾಯ. ಈ ಬಗ್ಗೆ ಅವರು ಅಕುಲ್​ ಬಾಲಾಜಿ ಜತೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Follow us on

Click on your DTH Provider to Add TV9 Kannada