ಅದೃಷ್ಟ ಬದಲಿಸಿದ ‘ಕೂಲಿ’; ಕಲ್ಯಾಣಿ ಪಾತ್ರ ಮಾಡಿದ ರಚಿತಾ ಹೇಳೋದಿಷ್ಟು

Updated on: Nov 19, 2025 | 12:59 PM

Rachita Ram New Movie ರಚಿತಾ ರಾಮ್ ಹಾಗೂ ಧ್ರುವ ಸರ್ಜಾ ಅವರು ಎಂಟು ವರ್ಷಗಳ ಬಳಿಕ ಮತ್ತೆ ಒಂದಾಗಿದ್ದಾರೆ. ಇವರು ‘ಕ್ರಿಮಿನಲ್’ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಮೂಡಿದೆ. ಆ ಸಿನಿಮಾ ಬಗ್ಗೆ ಇಲ್ಲಿದೆ ವಿವರ.

ರಚಿತಾ ರಾಮ್ ಅವರು ‘ಕೂಲಿ’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರು. ಈ ಪಾತ್ರ ಸಾಕಷ್ಟು ಗಮನ ಸೆಳೆದಿತ್ತು. ಈಗ ‘ಕೂಲಿ’ ಸಿನಿಮಾ ಆದ ಬಳಿಕ ಈ ರೀತಿಯ ಸಾಕಷ್ಟು ಆಫರ್​ಗಳು ಬರುತ್ತಾ ಇವೆಯಂತೆ. ‘ಕ್ರಿಮಿನಲ್’ ಸಿನಿಮಾದ ಈವೆಂಟ್​ನಲ್ಲಿ ರಚಿತಾ ರಾಮ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ಅವರು ಈ ಚಿತ್ರದಲ್ಲಿ ಉತ್ತರ ಕರ್ನಾಟಕ ಹುಡುಗಿ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 19, 2025 10:35 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More