ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್

Updated on: Jun 01, 2025 | 3:07 PM

ಈ ಮೊದಲು ಇನ್​ಸ್ಟಾಗ್ರಾಮ್​​ನಲ್ಲಿ ಕೂಡ ರಚಿತಾ ರಾಮ್ ಅವರು ಈ ವಿವಾದದ ಬಗ್ಗೆ ವಿಡಿಯೋ ಪೋಸ್ಟ್ ಮಾಡಿದ್ದರು. ಈಗ ಮಾಧ್ಯಮಗಳ ಎದುರು ಮತ್ತೊಮ್ಮೆ ಅದೇ ವಿಷಯದ ಬಗ್ಗೆ ಮಾತನಾಡಿದ್ದಾರೆ. ಕಮಲ್ ಹಾಸನ್ ಅವರು ‘ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿದ್ದಕ್ಕೆ ರಚಿತಾ ರಾಮ್ ಪ್ರತಿಕ್ರಿಯೆ ನೀಡಿದ್ದಾರೆ.

ಕನ್ನಡ ಭಾಷೆ ಬಗ್ಗೆ ಕಮಲ್ ಹಾಸನ್ (Kamal Haasan) ಅವರು ಆಡಿದ ಮಾತುಗಳನ್ನು ಕನ್ನಡ (Kannada) ಚಿತ್ರರಂಗದ ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ನಟಿ ರಚಿತಾ ರಾಮ್ ಕೂಡ ಈ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ನನ್ನ ಪ್ರೀತಿ ನನ್ನ ಭಾಷೆ. ಹಾಗಂತ ಬೇರೆ ಭಾಷೆ ಬಗ್ಗೆ ನಾನು ಎಂದಿಗೂ ಕಮೆಂಟ್ ಮಾಡಲ್ಲ. ಎಲ್ಲ ಭಾಷೆಯ ಹಾಡು ಕೇಳುತ್ತೇನೆ, ಎಲ್ಲ ಭಾಷೆ ಸಿನಿಮಾ ನೋಡುತ್ತೇನೆ. ಆದರೆ ನನ್ನ ಭಾಷೆಯೇ ನನಗೆ ಮುಖ್ಯ. ಮಾತೃಭಾಷೆಯನ್ನು ಮರೆಯಬಾರದು. ಈ ಮಾತು ನನಗೂ ಅನ್ವಯ’ ಎಂದು ರಚಿತಾ ರಾಮ್ (Rachita Ram) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More