‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ

Updated on: Jan 08, 2025 | 11:34 PM

‘ಈ ಸಿನಿಮಾದಲ್ಲಿ ಸಂಜು ವೆಡ್ಸ್​ ಗೀತಾ ಎಂಬ ಶೀರ್ಷಿಕೆಯನ್ನು ಮಾತ್ರ ಹಾಗೆಯೇ ಉಳಿಸಿಕೊಂಡಿದ್ದಾರೆ. ಆ ಚಿತ್ರದ ಯಾವುದೇ ಸನ್ನಿವೇಶ ಅಥವಾ ಪಾತ್ರವನ್ನು ಮುಂದುವರಿಸಿಲ್ಲ. ನಿರ್ದೇಶಕರು ಹೇಳಬೇಕಾಗಿದ್ದನ್ನು ನಾನೇ ಸ್ಪಷ್ಟಪಡಿಸುತ್ತಿದ್ದೇನೆ’ ಎಂದಿದ್ದಾರೆ ರಚಿತಾ ರಾಮ್. ಈ ಸಿನಿಮಾ ಒಪ್ಪಿಕೊಂಡಿದ್ದಕ್ಕೆ ಕಾರಣ ಏನು ಎಂದು ಕೂಡ ರಚಿತಾ ಉತ್ತರಿಸಿದ್ದಾರೆ.

‘ಸಂಜು ವೆಡ್ಸ್​ ಗೀತಾ’ ಸಿನಿಮಾದಲ್ಲಿ ರಮ್ಯಾ ಅವರು ನಾಯಕಿ ಆಗಿದ್ದರು. ಆದರೆ ‘ಸಂಜು ವೆಡ್ಸ್​ ಗೀತಾ 2’ ಸಿನಿಮಾಗೆ ರಚಿತಾ ರಾಮ್ ನಾಯಕಿ. ಆದರೆ ಈ ಸಿನಿಮಾದ ಕಥೆಯೇ ಬೇರೆ ಎಂದು ರಚಿತಾ ರಾಮ್ ಅವರು ಹೇಳಿದ್ದಾರೆ. ಜನವರಿ 10ರಂದು ‘ಸಂಜು ವೆಡ್ಸ್​ ಗೀತಾ 2’ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಕೆಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More