AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್

ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್

ಮಂಗಳ ರಾಜ್
| Edited By: |

Updated on: Jan 30, 2026 | 8:33 AM

Share

ನಟಿ ರಚಿತಾ ರಾಮ್ ಅವರು ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಒಂದನ್ನು ಮಾಡಿದ್ದಾರೆ. ಈ ಮನವಿಯಲ್ಲಿ ಅವರು ಒಂದು ವಿಷಯವನ್ನು ಒತ್ತಿ ಹೇಳಿದ್ದಾರೆ. ಅದುವೇ ಕಟೌಟ್. ಹೀರೋಗಳ ರೀತಿ ಹೀರೋಯಿನ್​​​ಗಳಿಗೂ ಕಟೌಟ್ ಬೇಕು ಎಂಬುದು ರಚಿತಾ ರಾಮ್ ಅವರ ಒತ್ತಾಯ. ಆ ಬಗ್ಗೆ ಅವರೇ ಆಡಿದ ಮಾತು ಇಲ್ಲಿದೆ.

ಚಿತ್ರಮಂದಿರಗಳ ಎದುರು ಸಾಮಾನ್ಯವಾಗಿ ದೊಡ್ಡದಾಗಿ ಹೀರೋಗಳ ಕಟೌಟ್ ಹಾಕಲಾಗುತ್ತದೆ. ಹೀರೋಯಿನ್​​ಗಳ ಕಟೌಟ್ ನಿಲ್ಲಿಸಲಾಗೋದಿಲ್ಲ. ‘ಲ್ಯಾಂಡ್​ ಲಾರ್ಡ್’ ಸಿನಿಮಾಗಾಗಿ ರಚಿತಾ ಕಟೌಟ್ ನಿಲ್ಲಿಸಲಾಗಿದೆ. ಹೀರೋಗಳ ಪಕ್ಕದಲ್ಲಿ ಹೀರೋಯಿನ್​​​ಗಳ ಕಟೌಟ್ ನಿಲ್ಲಿಸಬೇಕು ಎಂಬುದು ಅವರ ಕೋರಿಕೆ. ‘ಎಲ್ಲಾ ಹೀರೋಯಿನ್​​​ಗಳು ಕಟೌಟ್ ಬೇಕು. ಅವರ ಕಟೌಟ್ ನಿಲ್ಲಿಸಬೇಕು. ಇದು ಚಿತ್ರತಂಡಕ್ಕೆ ನನ್ನ ಮನವಿ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More