ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

ಮಂಜುನಾಥ ಸಿ.
|

Updated on: Jan 07, 2025 | 4:05 PM

Rachita Ram: ದರ್ಶನ್ ಬಗ್ಗೆ ಅಪಾರ ಅಭಿಮಾನ ಹೊಂದಿರುವ ನಟಿ ರಚಿತಾ ರಾಮ್, ದರ್ಶನ್ ಜೈಲಿನಲ್ಲಿದ್ದಾಗ ಹಲವು ಬಾರಿ ಅವರ ಪರವಾಗಿ ಮಾತನಾಡಿದ್ದರು. ಅವರಿಗೆ ಬೆಂಬಲ ಸೂಚಿಸಿದ್ದರು. ಇದೀಗ ದರ್ಶನ್ ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಜೊತೆಗೆ ರಚಿತಾ ರಾಮ್ ಮಾತನಾಡಿದರಾ? ಅವರೇ ಕೊಟ್ಟಿದ್ದಾರೆ ಉತ್ತರ.

ದರ್ಶನ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಚಿತಾ ರಾಮ್, ದರ್ಶನ್ ಅನ್ನು ತಮ್ಮ ಗಾಡ್ ಫಾದರ್ ಎಂದೇ ನಂಬಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗಲೂ ಸಹ ಅವಕಾಶ ಸಿಕ್ಕಾಗೆಲ್ಲ ಅವರ ಪರವಾಗಿ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ಗಳನ್ನು ಸಹ ಹಂಚಿಕೊಂಡಿದ್ದರು. ಇದೀಗ ದರ್ಶನ್ ಜೈಲಿನಿಂದ ಹೊರಬಂದು ತಿಂಗಳಿಗೂ ಹೆಚ್ಚು ಸಮಯವಾಗಿದ್ದು, ಈ ನಡುವೆ ದರ್ಶನ್ ಅವರೊಟ್ಟಿಗೆ ಮಾತನಾಡುವ ಅವಕಾಶ ಸಿಕ್ಕಿತಾ? ಈ ಬಗ್ಗೆ ರಚಿತಾ ರಾಮ್ ಟಿವಿ9 ಜೊತೆಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ