‘ಅಪ್ಪು ಸರ್​ ವಿಚಾರದಲ್ಲಿ ಮರಣ ಎಂಬ ಪದ ಬಳಸೋಕೆ ನಾನು ಇಷ್ಟಪಡಲ್ಲ’: ರಚಿತಾ ರಾಮ್​​

ಪುನೀತ್​ ರಾಜ್​ಕುಮಾರ್​ ಮತ್ತು ರಚಿತಾ ರಾಮ್ ಅವರು ‘ಚಕ್ರವ್ಯೂಹ’ ಮತ್ತು ‘ನಟ ಸಾರ್ವಭೌಮ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಅಪ್ಪು ನಿಧನರಾಗಿದ್ದು ಅವರಿಗೆ ತೀವ್ರ ನೋವುಂಟು ಮಾಡಿದೆ.

ಪುನೀತ್​ ರಾಜ್​ಕುಮಾರ್​ ಅವರು ನಮ್ಮೊಂದಿಗೆ ಇಲ್ಲ ಎಂಬುದನ್ನು ಒಪ್ಪಿಕೊಳ್ಳಲು ಕಷ್ಟ ಆಗುತ್ತಿದೆ. ಅಪ್ಪು ಜೊತೆ ಕೆಲಸ ಮಾಡಿದ ಕಲಾವಿದರಿಗೆ ಅವರ ಅಕಾಲಿಕ ಮರಣದಿಂದ ತೀವ್ರ ನೋವಾಗಿದೆ. ‘ಪುನೀತ್ ಅವರ ವಿಚಾರದಲ್ಲಿ ಮರಣ ಎಂಬ ಪದವನ್ನು ಬಳಸಲು ನಾನು ಇಷ್ಟಪಡುವುದಿಲ್ಲ’ ಎಂದು ರಚಿತಾ ರಾಮ್​ ಹೇಳಿದ್ದಾರೆ. ಪುನೀತ್​ ಮತ್ತು ರಚಿತಾ ರಾಮ್ ಅವರು ‘ಚಕ್ರವ್ಯೂಹ’ ಮತ್ತು ‘ನಟ ಸಾರ್ವಭೌಮ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಅಪ್ಪು ನಿಧನರಾಗಿದ್ದು ಅವರಿಗೆ ತೀವ್ರ ನೋವುಂಟು ಮಾಡಿದೆ.

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ರಚಿತಾ ರಾಮ್​ ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಪುನೀತ್​ ರಾಜ್​ಕುಮಾರ್​ ಅವರನ್ನು ನೆನಪು ಮಾಡಿಕೊಂಡರು. ‘ಅಪ್ಪು ಸರ್​ ನಮ್ಮನ್ನು ಬಿಟ್ಟು ಹೋಗಿಲ್ಲ. ಅವರು ನಮ್ಮ ಜೊತೆಗೆ ಇರುತ್ತಾರೆ. ಅವರ ವಿಚಾರದಲ್ಲಿ ಮರಣ ಎಂಬ ಪದ ಬಳಸೋಕೆ ನಾನು ಇಷ್ಟಪಡಲ್ಲ. ಅವರಿಂದ ಕಲಿಯುವಂತಹ ವಿಷಯ ಸಾಕಷ್ಟಿದೆ. ಮಾತಿನ ಮೂಲಕ ಅವರು ಹೇಳದೇ ಇರಬಹುದು. ಕೆಲಸದ ಮೂಲಕ ಅವರ ಆಶಯಗಳನ್ನು ಕಾರ್ಯರೂಪಕ್ಕೆ ತರಬೇಕು. ಅರ್ಥ ಮಾಡಿಕೊಂಡು ಬದುಕಿದರೆ ಜೀವನ ಚೆನ್ನಾಗಿ ಇರುತ್ತದೆ’ ಎಂದು ರಚಿತಾ ರಾಮ್​ ಹೇಳಿದ್ದಾರೆ.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪೂಜೆ ಸಲ್ಲಿಸಿ, ಗಳಗಳನೆ ಅತ್ತ ಕಾಲಿವುಡ್​ ನಟ ಸಿದ್ದಾರ್ಥ್​

Puneeth Rajkumar: ಪುನೀತ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ವ್ಯಕ್ತಿ ಅರೆಸ್ಟ್​; ಸೈಬರ್​ ಪೊಲೀಸರ ಬಲೆಗೆ ಬಿದ್ದ ಕಿಡಿಗೇಡಿ

Click on your DTH Provider to Add TV9 Kannada