ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ ರಾಮ್

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ ರಾಮ್

Malatesh Jaggin
| Updated By: ಮದನ್​ ಕುಮಾರ್​

Updated on: Jan 07, 2025 | 9:15 PM

ನಟಿ ರಚಿತಾ ರಾಮ್ ಅವರಿಗೆ ದುಡ್ಡು ಎಲ್ಲಿಂದ ಬರುತ್ತಿದೆ ಎಂಬ ಪ್ರಶ್ನೆ ಕೆಲವರಿಗೆ ಇದೆ. ಆ ಬಗ್ಗೆ ರಚಿತಾ ನೇರವಾಗಿ ಉತ್ತರ ನೀಡಿದ್ದಾರೆ. ‘ಅಯೋಗ್ಯ 2’, ‘ಸಂಜು ವೆಡ್ಸ್​ ಗೀತಾ 2’ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಟಿವಿ9 ಜೊತೆ ಮಾತನಾಡಿದ ರಚಿತಾ ರಾಮ್ ಅವರು ಕೆಲವು ವಿಚಾರಗಳಿಗೆ ಸ್ಪಷ್ಟನೆ ನೀಡಿದ್ದಾರೆ.

‘ಸಂಜು ವೆಡ್ಸ್​ ಗೀತಾ 2’ ಸಿನಿಮಾದಲ್ಲಿ ರಚಿತಾ ರಾಮ್ ಅವರು ನಟಿಸಿದ್ದಾರೆ. ಸೀರಿಯಲ್​ನಿಂದ ಬಂದು ಸಿನಿಮಾದಲ್ಲಿ ಮಿಂಚಿದ ರಚಿತಾ ಅವರಿಗೆ ಕೈತುಂಬ ಸಂಭಾವನೆ ಸಿಗುತ್ತಿದೆ. ಆದರೆ ಯಾವು ಯಾರಿಂದಲೂ ಸ್ಪಾನ್ಸರ್​ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ. ‘ಒಂದು ವೇಳೆ ಕಷ್ಟ ಬಂದು ಎಲ್ಲವನ್ನೂ ಕಳೆದುಕೊಂಡರೆ ದೇವಸ್ಥಾನದಲ್ಲಿ ಕೆಲಸ ಮಾಡಿ ಪ್ರಸಾದ ತಿಂದು ಬದುಕುತ್ತೇನೆ. ಯಾರ ಜೊತೆಗೂ ಹೋಗಿ ನಾನು ಇರುವುದಿಲ್ಲ. ಇದು ನನಗೆ ಅಪ್ಪ-ಅಮ್ಮ ಹೇಳಿಕೊಟ್ಟಿರುವುದು’ ಎಂದು ರಚಿತಾ ರಾಮ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.