Rachita Ram: ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿದ ಡಿಂಪಲ್ ಕ್ವೀನ್ ರಚಿತಾ ರಾಮ್

Updated on: May 31, 2023 | 2:41 PM

ರಚಿತಾ ರಾಮ್ ಇಂದು (ಮೇ 31) ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನಟಿ ರಚಿತಾ ರಾಮ್ (Rachita Ram) ಕನ್ನಡದ ಬೇಡಿಕೆಯ ಹೀರೋಯಿನ್​​ಗಳ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರು ಇಂದು (ಮೇ 31) ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅವರ ನಟನೆಯ ‘ಮ್ಯಾಟ್ನಿ’ ಹಾಗೂ ‘ಬ್ಯಾಡ್ ಮ್ಯಾನರ್ಸ್’ ರಿಲೀಸ್​ಗೆ ರೆಡಿ ಆಗುತ್ತಿವೆ. ಈ ಚಿತ್ರದ ಯಶಸ್ಸಿಗಾಗಿ ಅವರು ಪ್ರಾರ್ಥನೆ ಮಾಡಿದ್ದಾರೆ. ‘ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಬಗ್ಗೆ ಹೇಳಿದ್ದರು. ಹಾಗಾಗಿ ನನಗೂ ಇಲ್ಲಿಗೆ ಬರಬೇಕು ಅನ್ನಿಸಿತು ಬಂದುಬಿಟ್ಟೆ’ ಎಂದಿದ್ದಾರೆ ರಚಿತಾ ರಾಮ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More