ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್

Updated on: Oct 24, 2024 | 11:38 AM

Bigg Boss Kannada season 11: ಸುದ್ದಿ ವಾಚಕಿ ರಾಧಾ ಹಿರೇಗೌಡರ್, ಬಿಗ್​ಬಾಸ್ ಮನೆಗೆ ಎಂಟ್ರಿ ನೀಡಿದ್ದಾರೆ. ಮನೆಯಲ್ಲಿ ರಾಜಕೀಯದ ಟಾಸ್ಕ್ ನಡೆಯುತ್ತಿದ್ದು, ಮನೆಯ ರಾಜಕೀಯ ಪಕ್ಷಗಳನ್ನು, ರಾಜಕಾರಣಿಗಳನ್ನು ವಿಮರ್ಶೆಗೆ ಒಳಪಡಿಸಿದ್ದಾರೆ.

ಬಿಗ್​ಬಾಸ್ ಮನೆಯಲ್ಲೀಗ ರಾಜಕೀಯ ಹವಾ ಎದ್ದಿದೆ. ಮನೆಯ ಸದಸ್ಯರನ್ನು ಎರಡು ರಾಜಕೀಯ ಪಕ್ಷಗಳನ್ನಾಗಿ ವಿಂಗಡಿಸಿ ರಾಜಕೀಯದ ಟಾಸ್ಕ್ ನೀಡಿದ್ದಾರೆ ಬಿಗ್​ಬಾಸ್. ಮನೆಯಲ್ಲಿ ಪಕ್ಷ ರಾಜಕೀಯದ ಹವಾ ಜೋರಾಗಿರುವ ಸಂದರ್ಭದಲ್ಲಿಯೇ ಮನೆಗೆ ಸುದ್ದಿ ವಾಚಕಿಯೊಬ್ಬರ ಎಂಟ್ರಿ ಆಗಿದೆ. ಕನ್ನಡದ ಬೇರೆ ಬೇರೆ ವಾಹಿನಿಗಳಲ್ಲಿ ಸುದ್ದಿ ವಾಚಕಿಯಾಗಿ ಜನಪ್ರಿಯತೆ ಗಳಿಸಿರುವ ರಾಧಾ ಹಿರೇಗೌಡರ್ ಅವರು ಬಿಗ್​ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದು, ಮನೆಯಲ್ಲಿರುವ ಎರಡು ರಾಜಕೀಯ ಪಕ್ಷಗಳ ಹಾಗೂ ರಾಜಕಾರಣಿಗಳ ನೇರಾ-ನೇರ ವಿಶ್ಲೇಷಣೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More