VIDEO: ಉಫ್… ಹೀಗೂ ಕ್ಯಾಚ್ ಹಿಡೀತಾರಾ… ಅದ್ಭುತ ಅತ್ಯದ್ಭುತ
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದ್ದರು. ಈ ಗುರಿಯನ್ನು 20 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಇಂಗ್ಲೆಂಡ್ ತಂಡವು 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಸೋಲಿನ ಹೊರತಾಗಿಯೂ 5 ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 3-2 ಅಂತರದಿಂದ ಗೆದ್ದುಕೊಂಡಿದೆ.
ಭಾರತ ಮಹಿಳಾ ತಂಡದ ಅತ್ಯುತ್ತಮ ಫೀಲ್ಡರ್ ಯಾರು ಎಂಬ ಪ್ರಶ್ನೆಗೆ ಒಂದೇ ಉತ್ತರ ರಾಧಾ ಯಾದವ್. ಮೈದಾನದಲ್ಲಿ ಮಿಂಚಿನ ಸಂಚಲನ ಸೃಷ್ಟಿಸುವ ರಾಧಾ ಇದೀಗ ಮತ್ತೊಮ್ಮೆ ಫೀಲ್ಡಿಂಗ್ ಮೂಲಕ ಪರಾಕ್ರಮ ಮರೆದಿದ್ದಾರೆ. ಅದು ಕೂಡ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿಯುವ ಮೂಲಕ. ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ರಾಧಾ ಯಾದವ್ ಹಿಡಿದ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಪಂದ್ಯದ ಕೊನೆಯ ಓವರ್ನ 3ನೇ ಎಸೆತವನ್ನು ಆ್ಯಮಿ ಜೋನ್ಸ್ ಡೀಪ್ ಮಿಡ್ ವಿಕೆಟ್ನತ್ತ ಬಾರಿಸಿದ್ದರು. ಅತ್ತ ಬೌಂಡರಿ ಲೈನ್ನಲ್ಲಿ ಫೀಲ್ಡಿಂಗ್ನಲ್ಲಿದ್ದ ರಾಧಾ ಯಾದವ್ ಮಿಂಚಿನ ವೇಗದಲ್ಲಿ ಓಡಿ ಬಂದು ಅದ್ಭುತವಾಗಿ ಡೈವ್ ಹೊಡೆದು ಕ್ಯಾಚ್ ಹಿಡಿದಿದ್ದಾರೆ. ಈ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದರು. ಇದೀಗ ರಾಧಾ ಯಾದವ್ ಅವರ ಅದ್ಭುತ ಫೀಲ್ಡಿಂಗ್ ವಿಡಿಯೋ ಸಾಮಜಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದ್ದರು. ಈ ಗುರಿಯನ್ನು 20 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಇಂಗ್ಲೆಂಡ್ ತಂಡವು 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಸೋಲಿನ ಹೊರತಾಗಿಯೂ 5 ಪಂದ್ಯಗಳ ಸರಣಿಯನ್ನು ಟೀಮ್ ಇಂಡಿಯಾ 3-2 ಅಂತರದಿಂದ ಗೆದ್ದುಕೊಂಡಿದೆ.

