ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ; ಇಲ್ಲಿದೆ ವಿಶೇಷ ವಿಡಿಯೋ

Updated on: Oct 30, 2024 | 6:34 PM

‘ರಾಕಿಂಗ್ ಸ್ಟಾರ್​’ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರ ಪುತ್ರ ಯಥರ್ವ್​ಗೆ ಇಂದು (ಅಕ್ಟೋಬರ್​ 30) ಜನ್ಮದಿನದ ಸಂಭ್ರಮ. 5ನೇ ವರ್ಷದ ಹುಟ್ಟುಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದೆ. ಮಗನ ಬರ್ತ್​ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಈ ವಿಶೇಷ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಯಥರ್ವ್​ ಯಶ್ ಹುಟ್ಟುಹಬ್ಬದ ಸಲುವಾಗಿ ರಾಧಿಕಾ ಪಂಡಿತ್ ಅವರು ಸ್ಪೆಷಲ್ ವಿಡಿಯೋ ಅಪ್​ಲೋಡ್​ ಮಾಡಿದ್ದಾರೆ. ಮಗನ ಈ 5 ವರ್ಷಗಳ ಬೆಳವಣಿಗೆಯನ್ನು ಹಂತಹಂತವಾಗಿ ಚಿತ್ರಿಸಿದ ಫೋಟೋಗಳ ಗುಚ್ಛ ಈ ವಿಡಿಯೋದಲ್ಲಿದೆ. ಕಮೆಂಟ್ ಮಾಡಿದ ಅಭಿಮಾನಿಗಳು ಯಥರ್ವ್​ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಿದ್ದಾರೆ. ರಾಧಿಕಾ ಪಂಡಿತ್ ಅವರು ಮಕ್ಕಳ ಪಾಲನೆಗೆ ಹೆಚ್ಚು ಸಮಯ ನೀಡುತ್ತಿದ್ದಾರೆ. ಹಾಗಾಗಿ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More