ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್; ಸಿಹಿ ತಿನ್ನಿಸಿದ ನಿತಿನ್ ನಬಿನ್

Updated on: Apr 24, 2026 | 7:49 PM

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯರಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದರಿಂದ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್‌ಗೆ ಭಾರಿ ಆಘಾತವಾಗಿದೆ. ಇದೀಗ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಠಕ್ ಮತ್ತು ಮಿತ್ತಲ್ ಜೊತೆಗಿದ್ದ ರಾಘವ್ ಚಡ್ಡಾ, ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದರಲ್ಲಿ ಮೂರನೇ ಎರಡರಷ್ಟು ಜನರು ಪಕ್ಷವನ್ನು ತೊರೆದಿದ್ದಾರೆ ಮತ್ತು ಒಂದು ಬಣವಾಗಿ ಬಿಜೆಪಿಗೆ ಸೇರಲಿದ್ದಾರೆ ಎಂದು ಹೇಳಿದರು.

ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ನೀಡಿರುವ ಆಮ್ ಆದ್ಮಿ ಪಕ್ಷದ ಮೂವರು ರಾಜ್ಯಸಭಾ ಸಂಸದರಾದ ರಾಘವ್ ಚಡ್ಡಾ (Raghav Chadha), ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದರು. ಈ ವೇಳೆ ನಿತಿನ್ ನಬಿನ್ ಸಿಹಿ ತಿನ್ನಿಸಿ ಮೂರೂ ರಾಜ್ಯಸಭಾ ಸದಸ್ಯರನ್ನು ಬರಮಾಡಿಕೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More