‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ ನಾಯ್ಕ್

Edited By:

Updated on: Mar 24, 2026 | 7:53 PM

ಡಾರ್ಲಿಂಗ್ ಕೃಷ್ಣ ನಟನೆ, ನಿರ್ದೇಶನದ ‘ಲವ್ ಮಾಕ್ಟೇಲ್ 3’ ಸಿನಿಮಾದ ಕಥೆ ಬಗ್ಗೆ ಕೃತಿ ಚೌರ್ಯದ ಆರೋಪ ಎದುರಾಗಿದೆ. ರಾಘವೇಂದ್ರ ನಾಯ್ಕ್ ಅವರು ಈ ಕಥೆ ತಮ್ಮದು ಎಂದು ಹೇಳಿದ್ದಾರೆ. ಈ ಕಥೆಯನ್ನು2023ರಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಲಾಗಿತ್ತು ಎಂದು ರಾಘವೇಂದ್ರ ನಾಯ್ಕ್ ಹೇಳಿದ್ದಾರೆ.

ಡಾರ್ಲಿಂಗ್ ಕೃಷ್ಣ ನಟನೆ, ನಿರ್ದೇಶನದ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಎದುರಾಗಿದೆ. ರಾಘವೇಂದ್ರ ನಾಯ್ಕ್ ಅವರು ಈ ಕಥೆ ತಮ್ಮದು ಎಂದು ಹೇಳಿದ್ದಾರೆ. ಈ ಕಥೆಯನ್ನು2023ರಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಹೇಳಲಾಗಿತ್ತು. ಆದರೆ ಡಾರ್ಲಿಂಗ್ ಕೃಷ್ಣ (Darling Krishna) ಅವರು ಆ ಕಥೆಯನ್ನು ಒಪ್ಪಿಕೊಂಡಿರಲಿಲ್ಲ. ಆದರೆ ಈಗ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ಅದೇ ಕಥೆ ಇರುವುದು ನೋಡಿ ರಾಘವೇಂದ್ರ ನಾಯ್ಕ್ ಅವರಿಗೆ ಶಾಕ್ ಆಗಿದೆ. ‘ಈ ಸಿನಿಮಾದ ದ್ವಿತೀಯಾರ್ಧ ಸಂಪೂರ್ಣ ನಮ್ಮದೇ ಕಥೆಗೆ ಹತ್ತಿರವಾಗಿದೆ. ಅವರ ಹಿನ್ನೆಲೆ ಮತ್ತು ಪರಿಸರ ಬೇರೆ ಇದೆ. ಆದರೆ ಮುಖ್ಯ ವಿಚಾರ ಹಾಗೆಯೇ ಇದೆ. ಅದರಿಂದ ನನಗೆ ಬೇಜಾರು ಆಯಿತು. ಅದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡೆ. ಈಗ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದೇವೆ’ ಎಂದು ರಾಘವೇಂದ್ರ ನಾಯ್ಕ್ (Raghavendra Naik) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More