ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ಇಂದು (ನವೆಂಬರ್ 1) ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಪುನೀತ್ ರಾಜ್ಕುಮಾರ್ ಅವರಿಗೆ ಸಿಗುತ್ತಿರುವ ಈ ಗೌರವ ಮರಣೋತ್ತರ ಅಲ್ಲ ಎಂದು ರಾಘವೇಂದ್ರ ರಾಜ್ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ‘ಅವನ ನೆನಪು ಇರುವವರೆಗೂ ಪ್ರಶಸ್ತಿ ಬದುಕಿರುತ್ತದೆ. ಹಾಗಾಗಿ ಇದು ಮರಣೋತ್ತರ ಅಲ್ಲ’ ಎಂದು ರಾಘವೇಂದ್ರ ರಾಜ್ಕುಮಾರ್ ಅವರು ಹೇಳಿದ್ದಾರೆ.