Raghavendra Rajkumar: ‘ಜೇಮ್ಸ್’ಗೆ ರಾಘಣ್ಣ ಡಬ್ಬಿಂಗ್; ಫೋಟೋಗಳು ವೈರಲ್
James | Puneeth Rajkumar: ರಾಘವೇಂದ್ರ ರಾಜ್ಕುಮಾರ್ ಅವರು ‘ಜೇಮ್ಸ್’ ಚಿತ್ರಕ್ಕೆ ಡಬ್ಬಿಂಗ್ ಮಾಡಿದ್ದಾರೆ. ಈ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.
ನಟ ರಾಘವೇಂದ್ರ ರಾಜ್ಕುಮಾರ್ ಅವರು ‘ಜೇಮ್ಸ್’ ಚಿತ್ರಕ್ಕೆ ಡಬ್ಬಿಂಗ್ ಮಾಡಿದ್ದಾರೆ. ಪುನೀತ್ ನಟನೆಯ ಕೊನೆಯ ಚಿತ್ರವಾಗಿರುವ ‘ಜೇಮ್ಸ್’ ಮಾರ್ಚ್ 17ರಂದು ಅಪ್ಪು ಜನ್ಮದಿನದಂದು ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶಿವರಾಜ್ಕುಮಾರ್ ಹಾಗೂ ರಾಘಣ್ಣ ವಿಶೇಷ ಪಾತ್ರ ಮಾಡಿದ್ದಾರೆ. ಪುನೀತ್ ಪಾತ್ರಕ್ಕೆ ಶಿವರಾಜ್ಕುಮಾರ್ ಧ್ವನಿ ನೀಡಿದ್ದಾರೆ. ಇತ್ತೀಚೆಗಷ್ಟೇ ಅವರು ಡಬ್ಬಿಂಗ್ ಮುಗಿಸಿದ್ದರು. ಇದೀಗ ರಾಘವೇಂದ್ರ ರಾಜ್ಕುಮಾರ್ ಸ್ಟುಡಿಯೋಗೆ ಆಗಮಿಸಿ, ತಮ್ಮ ಪಾತ್ರಕ್ಕೆ ಧ್ವನಿ ನೀಡಿದ್ದಾರೆ. ಈ ಸಂದರ್ಭದ ಚಿತ್ರಗಳು ವೈರಲ್ ಆಗಿವೆ. ಚೇತನ್ ಕುಮಾರ್ ‘ಜೇಮ್ಸ್’ಗೆ ಆಕ್ಷನ್ ಕಟ್ ಹೇಳಿದ್ದು, ಕಿಶೋರ್ ಪತ್ತಿಕೊಂಡ ನಿರ್ಮಾಣ ಮಾಡಿದ್ದಾರೆ. ‘ಜೇಮ್ಸ್’ ಚಿತ್ರವನ್ನು ಬರಮಾಡಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಇದನ್ನೂ ಓದಿ:
Puneeth Rajkumar: ‘ಜೇಮ್ಸ್’ ಚಿತ್ರದ ಪುನೀತ್ ಪಾತ್ರಕ್ಕೆ ಕಂಠದಾನ ಮಾಡಿದ ಶಿವಣ್ಣ; ಇಲ್ಲಿವೆ ಫೋಟೋಗಳು
Shiva Rajkumar: ‘ಜೇಮ್ಸ್’ನಲ್ಲಿ ಪುನೀತ್ ಪಾತ್ರಕ್ಕೆ ಯಾರ ಧ್ವನಿ? ಅಭಿಮಾನಿಗಳ ಪ್ರಶ್ನೆಗೆ ಇಲ್ಲಿದೆ ಉತ್ತರ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

