‘ಕಾವೇರಿಗೆ ನಾನು ಜೀವ ಕೊಡ್ತೀನಿ’: ವಾಣಿಜ್ಯ ಮಂಡಳಿ ಚುನಾವಣೆ ವೇಳೆ ರಾಘವೇಂದ್ರ ರಾಜ್​ಕುಮಾರ್​ ಹೇಳಿಕೆ

Edited By:

Updated on: Sep 23, 2023 | 6:18 PM

‘ವಾಣಿಜ್ಯ ಮಂಡಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿ ಇರುತ್ತೇವೆ. ನನ್ನ ಈ ಜೀವ 10 ವರ್ಷದಿಂದ ಕಷ್ಟಪಟ್ಟುಕೊಂಡು ಬದುಕುತ್ತಿದೆ. ಜೀವ ಕೊಡುವುದರಿಂದ ಕಾವೇರಿಗೆ ಒಳ್ಳೆಯದು ಆಗುತ್ತೆ ಎಂದರೆ ನನ್ನ ಜೀವ ಕೊಡಲು ನಾನು ಮತ್ತು ನಮ್ಮ ಕುಟುಂಬ ಸಿದ್ಧ’ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ.

ಕಾವೇರಿ ನೀರು (Cauvery Water) ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಬಿಕ್ಕಟ್ಟು ಉಂಟಾಗಿದೆ. ಕರುನಾಡಿನಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈ ವೇಳೆ ಚಿತ್ರೋದ್ಯಮದಿಂದಲೂ ಪ್ರತಿಭಟನೆಗೆ ಬೆಂಬಲ ವ್ಯಕ್ತವಾಗಿದೆ. ನೀರಿಗಾಗಿ ನಡೆಯುತ್ತಿರುವ ಈ ಹೋರಾಟದಲ್ಲಿ ಭಾಗಿಯಾಗಲು ತಾವು ಸಿದ್ದ ಎಂದು ರಾಘವೇಂದ್ರ ರಾಜ್​ಕುಮಾರ್​ ಹೇಳಿದ್ದಾರೆ. ಇಂದು (ಸೆಪ್ಟೆಂಬರ್​ 23) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಚುನಾವಣೆಯಲ್ಲಿ ಮತ ಚಲಾಯಿಸಿದ ಬಳಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ನಮ್ಮ ಜನರಿಗೆ ತೊಂದರೆ ಆದಾಗ ನಮ್ಮ ಚಿತ್ರರಂಗ ಮತ್ತು ಕುಟುಂಬ ಯಾವಾಗಲೂ ಮುಂದೆ ಬರುತ್ತದೆ. ಎಲೆಕ್ಷನ್​ ಬಳಿಕ ವಾಣಿಜ್ಯ ಮಂಡಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿ ಇರುತ್ತೇವೆ. ನನ್ನ ಈ ಜೀವ 10 ವರ್ಷದಿಂದ ಕಷ್ಟಪಟ್ಟುಕೊಂಡು ಬದುಕುತ್ತಿದೆ. ಜೀವ ಕೊಡುವುದರಿಂದ ಕಾವೇರಿಗೆ ಒಳ್ಳೆಯದು ಆಗುತ್ತೆ ಎಂದರೆ ನನ್ನ ಜೀವ ಕೊಡಲು ನಾನು ಮತ್ತು ನಮ್ಮ ಕುಟುಂಬ ಸಿದ್ಧ’ ಎಂದು ರಾಘವೇಂದ್ರ ರಾಜ್​ಕುಮಾರ್​ (Raghavendra Rajkumar) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More