ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ

Updated on: Mar 13, 2026 | 7:54 PM

ಪುನೀತ್ ರಾಜ್​ಕುಮಾರ್, ರಮ್ಯಾ ದಿವ್ಯ ಸ್ಪಂದನಾ ಅಭಿನಯದ ‘ಆಕಾಶ್’ ಚಿತ್ರ ಮರು ಬಿಡುಗಡೆ ಆಗಿದೆ. ರಾಘವೇಂದ್ರ ರಾಜ್​ಕುಮಾರ್ ಅವರು ಈ ಚಿತ್ರವನ್ನು ನೋಡಲು ಇಂದು (ಮಾ.13) ಚಿತ್ರಮಂದಿರಕ್ಕೆ ಬಂದಿದ್ದಾರೆ. ಅಭಿಮಾನಿಗಳ ಜೊತೆ ಕುಳಿತು ಅವರು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತಾಡಿದರು.

ರಮ್ಯಾ, ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (Akasha Movie) ಮರು ಬಿಡುಗಡೆ ಆಗಿದೆ. ರಾಘವೇಂದ್ರ ರಾಜ್​ಕುಮಾರ್ ಅವರು ಈ ಸಿನಿಮಾ ನೋಡಲು ಇಂದು (ಮಾರ್ಚ್ 13) ಚಿತ್ರಮಂದಿರಕ್ಕೆ ಬಂದಿದ್ದಾರೆ. ಅಭಿಮಾನಿಗಳ ಜೊತೆ ಕುಳಿತು ಅವರು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳ ಜೊತೆ ಮಾತಾಡಿದರು. ‘ಪುನೀತ್ ಇಲ್ಲದೇ ಈ ಸಿನಿಮಾ ನೋಡಲು ಕಷ್ಟ ಆಗುತ್ತಿದೆ. ಮತ್ತೆ ಆ ದಿನಗಳು ವಾಪಸ್ ಬರಬಾರದೇ ಎನಿಸುತ್ತದೆ. ಆಕಾಶ್ ಸಿನಿಮಾ ಈಗ ನೋಡೋಕೂ ಅಷ್ಟೇ ಚೆನ್ನಾಗಿದೆ. ಅಪ್ಪು ಮತ್ತು ರಮ್ಯಾ ಜೋಡಿ ಚೆನ್ನಾಗಿದೆ. ಅಭಿಮಾನಿಗಳು ಅದೇ ಪ್ರೀತಿಯಿಂದ ಬಂದು ಸಿನಿಮಾ ನೋಡುತ್ತಿದ್ದಾರೆ. ಅದನ್ನು ನೋಡಿದಾಗ ಪುನೀತ್ ಇಲ್ಲ ಅಂತ ಅನಿಸಲ್ಲ’ ಎಂದು ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More