ರಾಘವೇಂದ್ರ ರಾಜ್ಕುಮಾರ್-ಶ್ರುತಿ ಹೊಸ ಚಿತ್ರ ‘13’; ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದ ಮುಹೂರ್ತ
‘13’ ಸಿನಿಮಾದಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರು ಗುಜುರಿ ಅಂಗಡಿಯ ಮಾಲಿಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕೆ ನರೇಂದ್ರ ಬಾಬು ನಿರ್ದೇಶನ ಮಾಡುತ್ತಿದ್ದಾರೆ.
ನಟ ರಾಘವೇಂದ್ರ ರಾಜ್ಕುಮಾರ್ (Raghavendra Rajkumar) ಅವರು ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ವಿಶೇಷ ಪಾತ್ರಗಳ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಅವರು ಅಭಿನಯಿಸಲಿರುವ ಹೊಸ ಸಿನಿಮಾ ಇಂದು (ಏ.9) ಸೆಟ್ಟೇರಿದೆ. ಈ ಚಿತ್ರಕ್ಕೆ ‘13’ ಎಂದು ಶೀರ್ಷಿಕೆ ಇಡಲಾಗಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಈ ಸಿನಿಮಾದ ಮುಹೂರ್ತ ನೆರವೇರಿದೆ. ‘13’ ಸಿನಿಮಾದಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರು ಗುಜುರಿ ಅಂಗಡಿಯ ಮಾಲಿಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಮುಸ್ಲಿಂ ಮಹಿಳೆಯಾಗಿ ಶ್ರುತಿ (Shruthi) ಬಣ್ಣ ಹಚ್ಚುತ್ತಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ‘13’ ಸಿನಿಮಾ (13 Kannada Movie) ನಿರೀಕ್ಷೆ ಮೂಡಿಸಿದೆ. ಪುನೀತ್ ರಾಜ್ಕುಮಾರ್ ನಿಧನದ ಬಳಿಕ ಡಾ. ರಾಜ್ಕುಮಾರ್ ಕುಟುಂಬಕ್ಕೆ ತೀವ್ರ ನೋವಾಗಿದೆ. ಆ ನೋವಿನ ನಡುವೆಯೂ ಬದುಕು ಸಾಗಬೇಕಿರುವುದು ಅನಿವಾರ್ಯ. ಆ ನಿಟ್ಟಿನಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರು ಪುನಃ ಸಿನಿಮಾ ಕೆಲಸಗಳಲ್ಲಿ ನಿರತರಾಗಿದ್ದಾರೆ. ‘13’ ಸಿನಿಮಾಗೆ ನರೇಂದ್ರ ಬಾಬು ನಿರ್ದೇಶನ ಮಾಡುತ್ತಿದ್ದಾರೆ.
ಇದನ್ನೂ ಓದಿ:
ವೀರೇಶ್ ಚಿತ್ರಮಂದಿರದಲ್ಲಿ ‘ಜೇಮ್ಸ್’ ಚಿತ್ರ ನೋಡಲು ಬಂದ ರಾಘವೇಂದ್ರ ರಾಜ್ಕುಮಾರ್ ಹೇಳಿದ್ದೇನು?
‘ಅಪ್ಪು ದೇಹಬಿಟ್ಟು ಹೋಗಿರಬಹುದು, ಆದರೆ ನಮ್ಮ ಮನಸ್ಸನ್ನು ಬಿಟ್ಟುಹೋಗಲು ಸಾಧ್ಯವಿಲ್ಲ’: ರಾಘಣ್ಣ

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್

ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್ಟಿಎಸ್

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
