‘ಇದು ಪ್ರಮೋಷನ್​ ಗಿಮಿಕ್​ ಅಲ್ಲ’; ‘ಜೇಮ್ಸ್​’ ಚಿತ್ರದಲ್ಲಿ ನಟಿಸಿದ ಬಗ್ಗೆ ರಾಘಣ್ಣ ಮಾತು

ಪುನೀತ್​ ರಾಜ್​ಕುಮಾರ್​ ನಟನೆಯ ‘ಜೇಮ್ಸ್​’ ಸಿನಿಮಾದಲ್ಲಿ ಶಿವಣ್ಣ ಮತ್ತು ರಾಘಣ್ಣ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ರಾಘವೇಂದ್ರ ರಾಜ್​ಕುಮಾರ್​ ಮಾತನಾಡಿದ್ದಾರೆ.

TV9kannada Web Team

| Edited By: Rajesh Duggumane

Jan 24, 2022 | 1:56 PM

ಪುನೀತ್​ ರಾಜ್​ಕುಮಾರ್ (Puneeth Rajkumar)​, ಶಿವರಾಜ್​ಕುಮಾರ್​ ಹಾಗೂ ರಾಘವೇಂದ್ರ ರಾಜ್​ಕುಮಾರ್​ ಒಟ್ಟಿಗೆ ಅಭಿನಯಿಸಬೇಕು ಎಂಬುದು ಅಭಿಮಾನಿಗಳ ಆಸೆ ಆಗಿತ್ತು. ಆದರೆ ಆ ಆಸೆ ಈಡೇರುವುದಕ್ಕೂ ಮುನ್ನವೇ ಪುನೀತ್​ ರಾಜ್​ಕುಮಾರ್ ಅವರು ಹೃದಯಾಘಾತದಿಂದ ಕಳೆದ ವರ್ಷ ಅ.29ರಂದು​ ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಡಾ. ರಾಜ್​ಕುಮಾರ್​ ಕುಟುಂಬದ ಕುಡಿಗಳನ್ನು ಒಂದೇ ಸಿನಿಮಾದಲ್ಲಿ ನೋಡಬೇಕು ಎನ್ನುವ ಅಭಿಮಾನಿಗಳ ಕನಸನ್ನು ನನಸು ಮಾಡಲು ‘ಜೇಮ್ಸ್​’ (James Kannada Movie) ಚಿತ್ರತಂಡ ಪ್ರಯತ್ನಿಸುತ್ತಿದೆ. ಪುನೀತ್​ ರಾಜ್​ಕುಮಾರ್​ ನಟನೆಯ ಈ ಸಿನಿಮಾದಲ್ಲಿ ಶಿವಣ್ಣ ಮತ್ತು ರಾಘಣ್ಣ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಘವೇಂದ್ರ ರಾಜ್​ಕುಮಾರ್​, ‘ಸಿನಿಮಾ ಹೈಪ್‌ಗಾಗಿ ನಾವು ಈ ಚಿತ್ರದಲ್ಲಿ ನಟಿಸುತ್ತಿಲ್ಲ. ಸೂಕ್ತ ಪಾತ್ರಗಳು ಇರುವ ಹಿನ್ನೆಲೆಯಲ್ಲಿ ನಟಿಸುತ್ತಿದ್ದೇವೆ. ಇದು ಪ್ರಮೋಷನಲ್​ ಗಿಮಿಕ್​ ಅಲ್ಲ’ ಎಂದಿದ್ದಾರೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ ಕುರಿತು ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಲೇಡಿ ಬಾಡಿ ಬಿಲ್ಡರ್​ ಮಮತಾ

ಪುನೀತ್​ ರಾಜ್​ಕುಮಾರ್ ಹೇಳಿದ ವಿಶೇಷ ಸಾಲುಗಳನ್ನು ನೆನಪಿಸಿಕೊಂಡ ಯೂಟ್ಯೂಬ್​ ಸಂಸ್ಥೆ

Follow us on

Click on your DTH Provider to Add TV9 Kannada