ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಡಾ. ರಾಜ್ಕುಮಾರ್ ಅವರ ಜನ್ಮದಿನದ ಪ್ರಯುಕ್ತ ರಾಘವೇಂದ್ರ ರಾಜ್ಕುಮಾರ್ ಅವರು ಅಣ್ಣಾವ್ರ ಸಮಾಧಿ ಸ್ಥಳಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಪ್ರಸ್ತುತ ಕನ್ನಡ ಚಿತ್ರರಂಗದ ಪರಿಸ್ಥಿತಿ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಜನರು ಚಿತ್ರಮಂದಿರಕ್ಕೆ ಬರುವುದು ಕಡಿಮೆ ಆಗಿದೆ. ಉತ್ತಮವಾದ ಸಿನಿಮಾಗಳು ರಿಲೀಸ್ ಆದಾಗಲೂ ಜನರು ಥಿಯೇಟರ್ (Theatre) ಕಡೆಗೆ ಮುಖ ಮಾಡುತ್ತಿಲ್ಲ. ಇದರಿಂದ ನಿರ್ಮಾಪಕರಿಗೆ, ನಿರ್ದೇಶಕರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಬೇಸರ ಆಗುತ್ತದೆ. ಇಂಥ ಪರಿಸ್ಥಿತಿ ಬಂದಿದ್ದರ ಬಗ್ಗೆ ರಾಘವೇಂದ್ರ ರಾಜ್ಕುಮಾರ್ (Raghavendra Rajkumar) ಅವರಿಗೆ ಪ್ರಶ್ನೆ ಕೇಳಲಾಯಿತು. ಅದಕ್ಕೆ ಅವರು ತಮ್ಮದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ. ‘ಒಮ್ಮೊಮ್ಮೆ ಈ ರೀತಿ ಆಗುತ್ತದೆ. ಆ ಕಾಲದಿಂದಲೂ ಹಾಗೆ ಆಗುತ್ತಿದೆ. ಅದು ಸಡನ್ ಆಗಿ ಸರಿ ಆಗುತ್ತದೆ. ಒಳ್ಳೆಯ ಸಿನಿಮಾಗಳು ಬರುತ್ತವೆ. ಚೆನ್ನಾಗಿ ಪ್ರದರ್ಶನ ಕಾಣುತ್ತವೆ’ ಎಂದು ರಾಘವೇಂದ್ರ ರಾಜ್ಕುಮಾರ್ ಅವರು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos