‘ಜೇಮ್ಸ್ ಚಿತ್ರಕ್ಕೆ ನನ್ನ ಪಾಲಿನ ಡಬ್ಬಿಂಗ್ ಮುಗಿಸಿದ್ದೇನೆ’; ರಾಘವೇಂದ್ರ ರಾಜ್ಕುಮಾರ್
‘ಜೇಮ್ಸ್’ ಸಿನಿಮಾದಲ್ಲಿ ಪುನೀತ್ ಸಹೋದರರಾದ ರಾಘವೇಂದ್ರ ರಾಜ್ಕುಮಾರ್ ಹಾಗೂ ಶಿವರಾಜ್ಕುಮಾರ್ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಶಿವರಾಜ್ಕುಮಾರ್ ಅವರು ಸಿನಿಮಾದ ಡಬ್ಬಿಂಗ್ ಕೆಲಸ ಪೂರ್ಣಗೊಳಿಸಿದ್ದರು. ಈಗ ರಾಘವೇಂದ್ರ ರಾಜ್ಕುಮಾರ್ ಅವರು ‘ಜೇಮ್ಸ್’ ಬಗ್ಗೆ ಮಾತನಾಡಿದ್ದಾರೆ.
ನಟ ಪುನೀತ್ ರಾಜ್ಕುಮಾರ್ (Puneeth Rajkumar) ಅಭಿನಯದ ‘ಜೇಮ್ಸ್’ ಸಿನಿಮಾ ಸಖತ್ ನಿರೀಕ್ಷೆ ಮೂಡಿಸಿದೆ. ಚೇತನ್ ಕುಮಾರ್ (Chetan Kumar) ನಿರ್ದೇಶನದ ಈ ಚಿತ್ರದ ಪೋಸ್ಟರ್ಗಳನ್ನು ಕಂಡು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ‘ಜೇಮ್ಸ್’ ಟೀಸರ್ (James Teaser) ಫೆ.11ರಂದು ಬೆಳಗ್ಗೆ 11.11ಕ್ಕೆ ರಿಲೀಸ್ ಆಗಲಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಯಾಗಿದ್ದಾರೆ. ಈ ಸಿನಿಮಾದಲ್ಲಿ ಪುನೀತ್ ಸಹೋದರರಾದ ರಾಘವೇಂದ್ರ ರಾಜ್ಕುಮಾರ್ ಹಾಗೂ ಶಿವರಾಜ್ಕುಮಾರ್ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಶಿವರಾಜ್ಕುಮಾರ್ ಅವರು ಸಿನಿಮಾದ ಡಬ್ಬಿಂಗ್ ಕೆಲಸ ಪೂರ್ಣಗೊಳಿಸಿದ್ದರು. ಈಗ ರಾಘವೇಂದ್ರ ರಾಜ್ಕುಮಾರ್ ಅವರು ‘ಜೇಮ್ಸ್’ ಬಗ್ಗೆ ಮಾತನಾಡಿದ್ದಾರೆ. ಅವರು ತಮ್ಮ ಪಾಲಿನ ಡಬ್ಬಿಂಗ್ ಮುಗಿಸಿದ್ದಾರೆ. ‘ನಾನು ‘ಜೇಮ್ಸ್’ ಚಿತ್ರಕ್ಕೆ ಡಬ್ಬಿಂಗ್ ಮುಗಿಸಿದ್ದೇನೆ. ನಾನು ಉಳಿದ ದೃಶ್ಯಗಳನ್ನು ನೋಡಿಲ್ಲ’ ಎಂದಿದ್ದಾರೆ ರಾಘವೇಂದ್ರ ರಾಜ್ಕುಮಾರ್.
ಇದನ್ನೂ ಓದಿ: ‘ಜೇಮ್ಸ್’ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿ; ಗುಡ್ ನ್ಯೂಸ್ ಕೇಳಿ ಖುಷಿಯಾದ ಪುನೀತ್ ಫ್ಯಾನ್ಸ್
ಪಾಟರಿಟೌನ್ ಮೆಟ್ರೊ ನಿಲ್ದಾಣಕ್ಕೆ ಪುನೀತ್ ರಾಜ್ಕುಮಾರ್ ಹೆಸರು ಇರಿಸಲು ಮನವಿ: ಪ್ರಧಾನಿ ಕಚೇರಿ ಸ್ಪಂದನೆ