ಸುದೀಪ್ ತಾಯಿ ಬಗ್ಗೆ ರಾಘಣ್ಣ ಮಾತು, ಹಳೆಯ ನೆನಪುಗಳ ಮೆಲುಕು

Updated on: Oct 20, 2024 | 1:12 PM

ಕಿಚ್ಚ ಸುದೀಪ್ ತಾಯಿ ಸರೋಜಾ ಅವರು ನಿಧನವಾಗಿದ್ದು, ಅಂತಿಮ ದರ್ಶನಕ್ಕೆ ಆಗಮಿಸಿದ್ದ ರಾಘವೇಂದ್ರ ರಾಜ್​ಕುಮಾರ್ ಅವರು, ಸರೋಜಾ ಹಾಗೂ ಪಾರ್ವತಮ್ಮನವರ ಗೆಳೆತನದ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಸುದೀಪ್​ಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದಿದ್ದಾರೆ.

ಕಿಚ್ಚ ಸುದೀಪ್ ತಾಯಿ ಸರೋಜಾ ಅವರು ಇಂದು (ಅಕ್ಟೋಬರ್ 20) ಬೆಳಿಗ್ಗೆ ನಿಧನ ಹೊಂದಿದ್ದಾರೆ. ಸುದೀಪ್ ಅವರ ಜೆಪಿ ನಗರದ ಮನೆಯ ಬಳಿ ಸುದೀಪ್ ತಾಯಿಯ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಚಿತ್ರರಂಗದ ಹಲವು ಗಣ್ಯರು, ಸುದೀಪ್ ಅವರ ಬಂಧುಗಳು ಸುದೀಪ ಮನೆಗೆ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ರಾಘವೇಂದ್ರ ರಾಜ್​ಕುಮಾರ್ ಅವರು ತಮ್ಮ ಮಕ್ಕಳೊಟ್ಟಿಗೆ ಬಂದು ಸುದೀಪ್ ಅವರ ತಾಯಿಯ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ರಾಜ್​ಕುಮಾರ್, ಸುದೀಪ್ ಅವರ ತಾಯಿ ಹಾಗೂ ಪಾರ್ವತಮ್ಮನವರು ಆತ್ಮೀಯ ಗೆಳೆಯರಾಗಿದ್ದರು ಎಂಬ ವಿಷಯ ಹಂಚಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More