ಅಶ್ವಿನಿ ಪುನೀತ್ಗೆ ಧೈರ್ಯ ತುಂಬಿದ ರಾಘವೇಂದ್ರ ರಾಜ್ಕುಮಾರ್
. ಅಪ್ಪು ಅಗಲಿ ಇಂದಿಗೆ ಒಂದು ತಿಂಗಳು ಕಳೆದಿರುವ ಹಿನ್ನೆಲೆಯಲ್ಲಿ ಕುಟುಂಬದವರು ಕಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಶ್ವಿನಿ ಪುನೀತ್ ರಾಜ್ಕುಮಾರ್ಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ ರಾಘವೇಂದ್ರ ರಾಜ್ಕುಮಾರ್.
‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಇಲ್ಲವಾಗಿ ಇಂದಿಗೆ (ನ.29) ಒಂದು ತಿಂಗಳು ಕಳೆದಿದೆ. ಅ.29ರಂದು ಅಪ್ಪು ಹೃದಯಾಘಾತಕ್ಕೆ ಒಳಗಾದ ಕರಾಳ ಸುದ್ದಿ ಕೇಳಿಬಂದಿತ್ತು. ಅವರು ಇಹಲೋಕ ತ್ಯಜಿಸಿದರು ಎಂಬ ಕಹಿ ಸುದ್ದಿ ಬಂದು ಕಿವಿಗೆ ಎರಗಿದಾಗ ಅದನ್ನು ಯಾರಿಂದಲೂ ನಂಬಲು ಸಾಧ್ಯವಾಗಿರಲಿಲ್ಲ. ಅಭಿಮಾನಿಗಳು ಮತ್ತು ಕುಟುಂಬದವರು ಈಗ ನೋವಿನ ಜೊತೆಯಲ್ಲೇ ಜೀವನ ಮುಂದುವರಿಸುವುದು ಅನಿವಾರ್ಯ ಆಗಿದೆ. ಅಪ್ಪು ಇನ್ನಿಲ್ಲ ಎಂಬ ಸತ್ಯವನ್ನು ಒಪ್ಪಿಕೊಂಡು, ಮುಂದಿನ ಕಾರ್ಯಗಳನ್ನು ಮಾಡಲಾಗುತ್ತಿದೆ. ಪುನೀತ್ ನೋಡಿಕೊಳ್ಳುತ್ತಿದ್ದ ‘ಪಿಆರ್ಕೆ ಪ್ರೊಡಕ್ಷನ್ಸ್’, ‘ಪಿಆರ್ಕೆ ಆಡಿಯೋ’, ‘ಶಕ್ತಿಧಾಮ’ ಮುಂತಾದ ಸಂಸ್ಥೆಗಳ ಜವಾಬ್ದಾರಿಯನ್ನು ಅವರ ಕುಟುಂಬ ನಿಭಾಯಿಸುತ್ತಿದೆ. ಅಪ್ಪು ಅಗಲಿ ಇಂದಿಗೆ ಒಂದು ತಿಂಗಳು ಕಳೆದಿರುವ ಹಿನ್ನೆಲೆಯಲ್ಲಿ ಕುಟುಂಬದವರು ಕಠೀರವ ಸ್ಟುಡಿಯೋ ಆವರಣದಲ್ಲಿ ಇರುವ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅಶ್ವಿನಿ ಪುನೀತ್ ರಾಜ್ಕುಮಾರ್ಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ ರಾಘವೇಂದ್ರ ರಾಜ್ಕುಮಾರ್.
ಇದನ್ನೂ ಓದಿ:ಪುನೀತ್ ರಾಜ್ಕುಮಾರ್ ಇಲ್ಲದ ಒಂದು ತಿಂಗಳು: ಈ 30 ದಿನದಲ್ಲಿ ಆಗಿವೆ ಹಲವು ಬದಲಾವಣೆಗಳು