AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್

ಮಲೆ ಮಹದೇಶ್ವರನ ದರ್ಶನ ಪಡೆದ ನಟ ರಾಘವೇಂದ್ರ ರಾಜ್​ಕುಮಾರ್

ರಾಜೇಶ್ ದುಗ್ಗುಮನೆ
|

Updated on:Oct 02, 2023 | 11:10 AM

Share

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು (ಅಕ್ಟೋಬರ್ 2) ನಟ ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಮಂಗಳಾ, ಕಿರಿಯ ಪುತ್ರ ಯುವ ರಾಜ್​ಕುಮಾರ್ ರಾಘವೇಂದ್ರ ರಾಜ್​ಕುಮಾರ್ ಸಾಥ್ ನೀಡಿದ್ದಾರೆ. ದಾಸೋಹ ಭವನದಲ್ಲಿ ಅವರು ಪ್ರಸಾದ ಸೇವಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು (ಅಕ್ಟೋಬರ್ 2) ನಟ ರಾಘವೇಂದ್ರ ರಾಜ್​ಕುಮಾರ್ (Raghavendra Rajkumar) ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಮಂಗಳಾ, ಕಿರಿಯ ಪುತ್ರ ಯುವ ರಾಜ್​ಕುಮಾರ್ ರಾಘವೇಂದ್ರ ರಾಜ್​ಕುಮಾರ್ ಸಾಥ್ ನೀಡಿದ್ದಾರೆ. ದಾಸೋಹ ಭವನದಲ್ಲಿ ಅವರು ಪ್ರಸಾದ ಸೇವಿಸಿದ್ದಾರೆ. ‘ಮಲೆ ಮಹದೇಶ್ವರನ ತಾಣ ನಮಗೆ ಸ್ವರ್ಗದಂತೆ ಭಾಸವಾಗುತ್ತಿದೆ. ವರ್ಷಕ್ಕೆ ಒಮ್ಮೆಯಾದರೂ ಬರಬೇಕು ಅನಿಸುತ್ತದೆ. ನಮ್ಮ ತಂದೆ ರಾಜಕುಮಾರ್ ಅವರು ಒಂದು ಸಲ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆ ಮೇಲೆ ಇಲ್ಲಿಗೆ ನಾನು ಬಂದಿರಲಿಲ್ಲ’ ಎಂದು ರಾಘವೇಂದ್ರ ರಾಜ್​ಕುಮಾರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Oct 02, 2023 11:09 AM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More