ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ

Updated on: Mar 12, 2026 | 10:16 PM

ಖ್ಯಾತ ನಟಿ ರಾಗಿಣಿ ದ್ವಿವೇದಿ ಫಿಟ್ನೆಸ್ ಬಗ್ಗೆ ಬಹಳ ಗಮನ ಹರಿಸುತ್ತಾರೆ. ಆದರೆ ಆಕೆ ಆಹಾರಪ್ರಿಯೆ ಸಹ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮಗೆ ಇಷ್ಟವಾದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಅವರು ಆಹಾರಪ್ರಿಯೆ ಕೂಡ ಹೌದು. ದೆಹಲಿಗೆ ತೆರಳಿದ ಅವರು ಡಯೆಟ್ ಮರೆತು ತಮ್ಮ ಇಷ್ಟದ ತಿಂಡಿ ಸೇವಿಸಿದ್ದಾರೆ. ತಟ್ಟೆ ತುಂಬ ಊಟ ಹಾಕಿಸಿಕೊಂಡಿರುವ ಈ ವಿಡಿಯೋವನ್ನು ಅವರೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ದೆಹಲಿಯಲ್ಲಿ ಮೇಘಾಲಯದ ಮೋಮೋಸ್ (Meghalaya Momos) ತಿಂದು ಅವರು ಎಂಜಾಯ್ ಮಾಡಿದ್ದಾರೆ. ಕನ್ನಡ ಮಾತ್ರವಲ್ಲದೇ ಪರಭಾಷೆ ಸಿನಿಮಾಗಳಲ್ಲಿ ಕೂಡ ರಾಗಿಣಿ ದ್ವಿವೇದಿ ಅವರು ಬ್ಯುಸಿ ಆಗಿದ್ದಾರೆ. ಸೋಶಿಯಲ್ ಮೀಡಿಯಾ ಬಳಕೆಯಲ್ಲಿ ಅವರು ಸಕ್ರಿಯರಾಗಿದ್ದಾರೆ. ಈ ರೀತಿಯ ಅನೇಕ ವಿಡಿಯೋಗಳನ್ನು ಅವರು ಅಭಿಮಾನಿಗಳಿಗಾಗಿ ಪೋಸ್ಟ್ ಮಾಡುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More