ದ್ರಾವಿಡ್ ಬಯೋಪಿಕ್ನಲ್ಲಿ ಸುದೀಪ್ ಮುಖ್ಯಭೂಮಿಕೆ? ಹಕ್ಕು ತಂದ್ರೆ ಸಿನಿಮಾ ಮಾಡ್ತೀನಿ ಎಂದ ಕಬೀರ್ ಖಾನ್
ರಾಹುಲ್ ದ್ರಾವಿಡ್ ಅವರ ಬಯೋಪಿಕ್ ಮಾಡುವ ವಿಚಾರವೂ ಚರ್ಚೆಗೆ ಬಂದಿದೆ. ಕಿಚ್ಚ ಸುದೀಪ್ ಅವರು ಇದರಲ್ಲಿ ರಾಹುಲ್ ದ್ರಾವಿಡ್ ಅವರ ಪಾತ್ರವನ್ನು ಮಾಡಬೇಕು ಎನ್ನುವ ಆಗ್ರಹ ಕೇಳಿಬಂತು. ಇದಕ್ಕೆ ‘83’ ನಿರ್ದೇಶಕ ಕಬೀರ್ ಖಾನ್ ಒಪ್ಪಿಗೆ ನೀಡಿದ್ದಾರೆ. ‘
‘83’ ಸಿನಿಮಾದ ಸುದ್ದಿಗೋಷ್ಠಿ ಬೆಂಗಳೂರಿನಲ್ಲಿ ಇಂದು (ಡಿಸೆಂಬರ್ 18) ನಡೆಯಿತು. . ಕಿಚ್ಚ ಸುದೀಪ್ ಅವರು ಕೂಡ ಈಗ ಈ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ. ಅಂದರೆ, ಕನ್ನಡದಲ್ಲಿ ‘83’ ಸಿನಿಮಾವನ್ನು ಸುದೀಪ್ ಅರ್ಪಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಇದೇ ವೇಳೆ ಮಾಜಿ ಕ್ರಿಕೆಟಿಗ, ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರ ಬಯೋಪಿಕ್ ಮಾಡುವ ವಿಚಾರವೂ ಚರ್ಚೆಗೆ ಬಂದಿದೆ. ಕಿಚ್ಚ ಸುದೀಪ್ ಅವರು ಇದರಲ್ಲಿ ರಾಹುಲ್ ದ್ರಾವಿಡ್ ಅವರ ಪಾತ್ರವನ್ನು ಮಾಡಬೇಕು ಎನ್ನುವ ಆಗ್ರಹ ಕೇಳಿಬಂತು. ಇದಕ್ಕೆ ‘83’ ನಿರ್ದೇಶಕ ಕಬೀರ್ ಖಾನ್ ಒಪ್ಪಿಗೆ ನೀಡಿದ್ದಾರೆ. ‘ಹಕ್ಕನ್ನು ತಂದ್ರೆ ಬಯೋಪಿಕ್ ಮಾಡ್ತೀನಿ’ ಎಂದಿದ್ದಾರೆ ಅವರು. ಸದ್ಯ, ಈ ವಿಚಾರ ಸಾಕಷ್ಟು ಚರ್ಚೆ ಆಗುತ್ತಿದೆ. ಈ ವಿಚಾರ ಕೇಳಿ ರಣವೀರ್ ಸಿಂಗ್ ಕೂಡ ಖುಷಿಪಟ್ಟಿದ್ದಾರೆ.
ಇದನ್ನೂ ಓದಿ: ಒಂದೇ ವೇದಿಕೆ ಮೇಲೆ ಸುದೀಪ್, ರಣವೀರ್, ಕಪಿಲ್ ದೇವ್; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
