ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ

Updated on: Oct 12, 2026 | 8:12 PM

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಬೃಹತ್ ಪ್ರತಿಭಟನೆಯ ನಡುವೆ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ ಜ್ಞಾನೇಶ್ ಕುಮಾರ್ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಹಾಗೂ 10-15 ನಾಯಕರ ಕಾಂಗ್ರೆಸ್ ನಿಯೋಗವು ಸುಪ್ರೀಂ ಕೋರ್ಟ್ ಕೌಂಟರ್ ತಲುಪಿ, ಚುನಾವಣಾ ಆಯೋಗದ ವಿರುದ್ಧ ದಾಖಲಿಸಲಾಗಿರುವ ರಿಟ್ ಅರ್ಜಿಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿತು. ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಇಡೀ ದೆಹಲಿಯನ್ನು ಪೊಲೀಸರ ಕೋಟೆಯನ್ನಾಗಿ ಪರಿವರ್ತಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ನವದೆಹಲಿ, ಅಕ್ಟೋಬರ್ 12: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್​ಐಆರ್) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ ಇಂಡಿಯ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ‘ದಿಲ್ಲಿ ಚಲೋ’ ಪ್ರತಿಭಟನಾ ಪಾದಯಾತ್ರೆಯ ನೇತೃತ್ವ ವಹಿಸಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಸಂಜೆ ಸಾವಿರಾರು ಕಾರ್ಯಕರ್ತರೊಂದಿಗೆ ಸುಪ್ರೀಂ ಕೋರ್ಟ್ ಆವರಣವನ್ನು ತಲುಪಿದ್ದಾರೆ. ದೆಹಲಿಯ ಕಾನಾಟ್ ಪ್ಲೇಸ್ ಹಾಗೂ ಬಾರಾಖಂಬಾ ರಸ್ತೆಯಿಂದ ಆರಂಭವಾದ ಈ ಬೃಹತ್ ಮೆರವಣಿಗೆಯಲ್ಲಿ ವಿವಿಧ ಪಕ್ಷಗಳ ಮುಖಂಡರು, ಸಂಸದರು ಮತ್ತು ನಾಗರಿಕರು ಪಾಲ್ಗೊಂಡು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಹಾಗೂ 10-15 ನಾಯಕರ ಕಾಂಗ್ರೆಸ್ ನಿಯೋಗವು ಸುಪ್ರೀಂ ಕೋರ್ಟ್ ಕೌಂಟರ್ ತಲುಪಿ, ಚುನಾವಣಾ ಆಯೋಗದ ವಿರುದ್ಧ ದಾಖಲಿಸಲಾಗಿರುವ ರಿಟ್ ಅರ್ಜಿಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿತು. ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಇಡೀ ದೆಹಲಿಯನ್ನು ಪೊಲೀಸರ ಕೋಟೆಯನ್ನಾಗಿ ಪರಿವರ್ತಿಸಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More