AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಭೇಟಿಗೆ ಹೊರಟ ಇಂಡಿಯ ಬ್ಲಾಕ್ ನಾಯಕರು; ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ

ರಾಷ್ಟ್ರಪತಿ ಭೇಟಿಗೆ ಹೊರಟ ಇಂಡಿಯ ಬ್ಲಾಕ್ ನಾಯಕರು; ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ

ಸುಷ್ಮಾ ಚಕ್ರೆ
|

Updated on:Oct 09, 2026 | 8:23 PM

Share

ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂಬ ತಮ್ಮ ಆಗ್ರಹವನ್ನು ಮುಂದಿಟ್ಟುಕೊಂಡು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದ ವಿಪಕ್ಷ ಸಂಸದರ ತಂಡವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ನಿಗದಿಯಾಗಿದ್ದ ಸಭೆಗಾಗಿ ಸಂಸತ್ತಿನಿಂದ ರಾಷ್ಟ್ರಪತಿ ಭವನದತ್ತ ಪಾದಯಾತ್ರೆ ಪ್ರಾರಂಭಿಸಿತು. 10 ನಾಯಕರ ತಂಡವು ರಾಷ್ಟ್ರಪತಿಗಳನ್ನು ಭೇಟಿಯಾಗಲಿದೆ. ಈ ವೇಳೆ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಭಾಗವಹಿಸಿದ್ದರು.

ನವದೆಹಲಿ, ಅಕ್ಟೋಬರ್ 9: ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕೆಂಬ ತಮ್ಮ ಆಗ್ರಹವನ್ನು ಮುಂದಿಟ್ಟುಕೊಂಡು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದ ವಿಪಕ್ಷ ಸಂಸದರ ತಂಡವು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ನಿಗದಿಯಾಗಿದ್ದ ಸಭೆಗಾಗಿ ಸಂಸತ್ತಿನಿಂದ ರಾಷ್ಟ್ರಪತಿ ಭವನದತ್ತ ಪಾದಯಾತ್ರೆ ಪ್ರಾರಂಭಿಸಿತು. 10 ನಾಯಕರ ತಂಡವು ರಾಷ್ಟ್ರಪತಿಗಳನ್ನು ಭೇಟಿಯಾಗಲಿದೆ. ಈ ವೇಳೆ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಭಾಗವಹಿಸಿದ್ದರು.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ‘ಇಂಡಿಯಾ’ (INDIA) ಮೈತ್ರಿಕೂಟದ 150 ಸಂಸದರ ಸಭೆಯ ನಂತರ ಈ ಪಾದಯಾತ್ರೆ ಆರಂಭವಾಯಿತು. ಈ ಸಭೆಯಲ್ಲಿ 16 ವಿವಿಧ ರಾಜಕೀಯ ಪಕ್ಷಗಳ 16 ನಾಯಕರು ರಾಷ್ಟ್ರಪತಿಯವರಿಗೆ ಸಲ್ಲಿಸಲಿರುವ ಮನವಿ ಪತ್ರಕ್ಕೆ ಸಹಿ ಹಾಕಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 09, 2026 08:22 PM

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More