Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರದ ಆರೋಪಗಳ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಲಿಲ್ಲ: ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

ಭ್ರಷ್ಟಾಚಾರದ ಆರೋಪಗಳ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಲಿಲ್ಲ: ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 03, 2023 | 4:19 PM

ಲೋಕ ಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕಾರ್ಯಾಕರ್ತರ ಜೊತೆ ಸಮನ್ವಯತೆ ಕಾಯ್ದುಕೊಂಡು ಹೆಚ್ಚೆಚ್ಚು ಸ್ಥಾನ ಗೆಲ್ಲುವ ಪ್ರಯತ್ನ ಮಾಡುವಂತೆ ರಾಹುಲ್ ಗಾಂಧಿ ಸೂಚಿಸಿರುವರೆಂದು ಗುಂಡೂರಾವ್ ಹೇಳಿದರು

ಬೆಂಗಳೂರು: ಬುಧವಾರ ದೆಹಲಿಯಲ್ಲಿ ಹೈಕಮಾಂಡ್ ಕರೆದ ಸಭೆಯಲ್ಲಿ ಭಾಗವಹಿಸಿ ಬೆಂಗಳೂರಿಗೆ ವಾಪಸ್ಸಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಧ್ಯಮಗಳಿಗೆ ಹೇಳಿದರು. ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ನೀಡಿರುವ ಎಚ್ಚರಿಕೆ ಬಗ್ಗೆ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಅದರೆ ಆ ವಿಷಯ ಚರ್ಚೆಗೆ ಬರಲಿಲ್ಲ ಎಂದು ಗುಂಡೂರಾವ್ ಹೇಳುತ್ತಾರೆ. ಲೋಕ ಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಕಾರ್ಯಾಕರ್ತರ ಜೊತೆ ಸಮನ್ವಯತೆ ಕಾಯ್ದುಕೊಂಡು ಹೆಚ್ಚೆಚ್ಚು ಸ್ಥಾನ ಗೆಲ್ಲುವ ಪ್ರಯತ್ನ ಮಾಡುವಂತೆ ರಾಹುಲ್ ಗಾಂಧಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸೂಚಿಸಿದ್ದಾರೆ ಎಂದು ಗುಂಡೂರಾವ್ ಹೇಳಿದರು. ಒತ್ತಡಗಳ ನಡುವೆಯೂ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಜಾರಿಗೆ ತಂದಿರುವುದಕ್ಕೆ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದರೆಂದು ಗುಂಡೂರಾವ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ