Video: ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ: ರಾಹುಲ್ ಗಾಂಧಿ
ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ ಎಂದು ವಿರೋಧಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಹೇಳಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನಮ್ಮ ಕೆಲಸ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವುದೇ ಹೊರತು ಅದನ್ನು ರಕ್ಷಿಸುವುದಲ್ಲ ಎಂದು ಹೇಳಿದ್ದಾರೆ. ಕರ್ನಾಟಕದ ಆಳಂದ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ 6 ಸಾವಿರ ಹೆಸರುಗಳು ಡಿಲೀಟ್ ಆಗಿರುವ ಕುರಿತು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದರು.
ನವದೆಹಲಿ, ಸೆಪ್ಟೆಂಬರ್ 19: ಪ್ರಜಾಪ್ರಭುತ್ವವನ್ನು ರಕ್ಷಿಸುವುದು ನನ್ನ ಕೆಲಸವಲ್ಲ ಎಂದು ವಿರೋಧಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಹೇಳಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ನಮ್ಮ ಕೆಲಸ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವುದೇ ಹೊರತು ಅದನ್ನು ರಕ್ಷಿಸುವುದಲ್ಲ ಎಂದು ಹೇಳಿದ್ದಾರೆ. ಕರ್ನಾಟಕದ ಆಳಂದ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಿಂದ 6 ಸಾವಿರ ಹೆಸರುಗಳು ಡಿಲೀಟ್ ಆಗಿರುವ ಕುರಿತು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದರು.
ಕಾಂಗ್ರೆಸ್ ಮತದಾರರ ಹೆಸರುಗಳನ್ನೇ ಹೆಚ್ಚಾಗಿ ಅಳಿಸಿಹಾಕಲಾಗಿದೆ ಎಂದು ಆರೋಪಿಸಿದ್ದರು. ಈ ಸಮಯದಲ್ಲಿ ಹಾಗಾದರೆ ನೀವು ಈ ವಿಚಾರವಾಗಿ ಕೋರ್ಟ್ ಮೆಟ್ಟಿಲೇರುತ್ತೀರಾ ಎಂದು ಕೇಳಿದಾಗ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಇಲ್ಲಿ ಮಾಡುತ್ತಿರುವುದು ನನ್ನ ಕೆಲಸವಲ್ಲ. ನನ್ನ ಕೆಲಸ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾಗವಹಿಸುವುದು, ನನ್ನ ಕೆಲಸ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಿಸುವುದಲ್ಲ ಎಂದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

