ರಾಹುಲ್ ಗಾಂಧಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಾಂವಿಧಾನಿಕ ಸಂಸ್ಥೆಗಳ ಮೇಲೆ ವಿಶ್ವಾಸವಿಲ್ಲ: ವಿಜಯೇಂದ್ರ

Updated on: Aug 12, 2025 | 8:08 PM

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರು ಚಾಲಕನೊಬ್ಬರು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಆವರಣದಲ್ಲಿ ನೇಣು ಬಿಗಿದಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಮತ್ತು ಡೆತ್ ನೋಟ್ ನಲ್ಲ್ಲಿ ಸಂಸದ ಡಾ ಕೆ ಸುಧಾಕರ್ ಹೆಸರು ಉಲ್ಲೇಖಿಸಿದ್ದು ಒಂದು ರಾಜಕೀಯ ಷಡ್ಯಂತ್ರ, ಅವರ ರಾಜಕೀಯ ಏಳಿಗೆ ಸಹಿಸದೆ ಹೀಗೆ ಮಾಡಲಾಗಿದೆ, ಇದರಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಹೆಸರು ಕೇಳಿಬರುತ್ತಿದೆ ಎಂದು ವಿಜಯೇಂದ್ರ ಹೇಳಿದರು.

ಚಿಕ್ಕಬಳ್ಳಾಪುರ, ಆಗಸ್ಟ್ 12: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ (internal democracy) ಇಲ್ಲ ಮತ್ತು ಅದಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶ್ವಾಸವೂ ಇಲ್ಲ, ಒಂದು ಪಕ್ಷ ಇದ್ದಿದ್ದೇಯಾದರೆ, ರಾಹುಲ್ ಗಾಂಧಿಯವರು ಚುನಾವಣಾ ಆಯೋಗದಂಥ ಸಾಂವಿಧಾನಿಕ ಸಂಸ್ಥೆಗಳನ್ನು ಪ್ರಶ್ನಿಸುವ ದುಸ್ಸಾಹಸಕ್ಕೆ ಕೈ ಹಾಕುತ್ತಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಅವರು, ಸಿದ್ದರಾಮಯ್ಯ ಹಿಂದುಳಿದವರ ಬಗ್ಗೆ ಬಹಳ ಕಾಳಜಿಯಿಂದ ಮಾತಾಡುತ್ತಾರೆ ಮತ್ತು ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದು ದೇಶದೆಲ್ಲೆಡೆ ಸುತ್ತುತ್ತಾರೆ, ಆದರೆ ಕಾಂಗ್ರೆಸ್ ದಲಿತರನ್ನು ಮತ್ತು ಹಿಂದುಳಿದವರನ್ನು ಕೇವಲ ವೋಟ್ ಬ್ಯಾಂಕ್​ಗಳಾಗಿ ಬಳಸಿಕೊಂಡಿದೆ ಎಂದರು.

ಇದನ್ನೂ ಓದಿ:   ಮಹದೇವಪುರ ಮಾತ್ರ ಯಾಕೆ? ಶಿವಾಜಿನಗರ ಮತ್ತು ಚಾಮರಾಜಪೇಟೆ ಕ್ಷೇತ್ರಗಳ ಮೇಲೂ ಚರ್ಚೆಯಾಗಲಿ: ವಿಜಯೇಂದ್ರ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ