ಏಷ್ಯಾ ಕಪ್ ವಿವಾದದ ಬೆನ್ನಲ್ಲೇ ರಾಹುಲ್ ಗಾಂಧಿ ಬಗ್ಗೆ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಮೆಚ್ಚುಗೆ
2025ರ ಏಷ್ಯಾ ಕಪ್‌ನ ಭಾನುವಾರದ ಭಾರತ ಮತ್ತು ಪಾಕಿಸ್ತಾನದ ಪಂದ್ಯದ ನಂತರ ಭಾರತೀಯ ಆಟಗಾರರು ತಮ್ಮ ಪಾಕಿಸ್ತಾನಿ ಸಹವರ್ತಿಗಳೊಂದಿಗೆ ಕೈಕುಲುಕಲು ನಿರಾಕರಿಸಿದ್ದರು. ಈ ವಿವಾದದ ನಂತರ ಶಾಹಿದ್ ಅಫ್ರಿದಿ ಭಾರತದ ವಿರುದ್ಧ ಟೀಕೆ ಮಾಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಇಸ್ಲಮಾಬಾದ್, ಸೆಪ್ಟೆಂಬರ್ 16: ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahidi Afridi) ಭಾರತದ ಬಿಜೆಪಿ ನೇತೃತ್ವದ ಸರ್ಕಾರವನ್ನು ಟೀಕಿಸುತ್ತಾ, ಟಿವಿ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ. ಏಷ್ಯಾ ಕಪ್‌ನ ಭಾಗವಾಗಿ ಇತ್ತೀಚೆಗೆ ನಡೆದ ಭಾರತ-ಪಾಕಿಸ್ತಾನ ಪಂದ್ಯದ ಕುರಿತು ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನದ ಖಾಸಗಿ ಟಿವಿಯೊಂದಿಗೆ ಮಾತನಾಡಿದ ಶಾಹಿದ್ ಅಫ್ರಿದಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯಕ್ಕಾಗಿ ಧರ್ಮವನ್ನು ಬಳಸುತ್ತಿದೆ ಎಂದು ಆರೋಪಿಸಿದ್ದಾರೆ.
“ಭಾರತದಲ್ಲಿರುವ ಸರ್ಕಾರ ಅಧಿಕಾರದಲ್ಲಿ ಉಳಿಯಲು ಯಾವಾಗಲೂ ಧರ್ಮ ಮತ್ತು ಮುಸ್ಲಿಂ-ಹಿಂದೂ ಎಂಬ ಧರ್ಮವನ್ನು ಮಧ್ಯಕ್ಕೆ ಎಳೆಯುತ್ತಿದೆ. ಇದು ತುಂಬಾ ಕೆಟ್ಟ ಮನಸ್ಥಿತಿ. ಅವರು ಅಧಿಕಾರದಲ್ಲಿ ಇರುವವರೆಗೂ ಇದು ಇರುತ್ತದೆ. ಅವರಲ್ಲಿ ಕೆಲವು ಒಳ್ಳೆಯ ಮನಸ್ಥಿತಿಯೂ ಇರುತ್ತದೆ. ಉದಾಹರಣೆಗೆ, ರಾಹುಲ್ ಗಾಂಧಿ ತುಂಬಾ ಪಾಸಿಟಿವ್ ಮನಸ್ಥಿತಿಯನ್ನು ಹೊಂದಿದ್ದಾರೆ. ಅವರು ಮಾತುಕತೆಯಲ್ಲಿ ನಂಬಿಕೆ ಇಟ್ಟವರು. ಅವರು ತಮ್ಮೊಂದಿಗೆ ಜನರನ್ನು ಕರೆದುಕೊಂಡು ಹೋಗುತ್ತಾರೆ” ಎಂದು ಶಾಹಿದ್ ಅಫ್ರಿದಿ ಉರ್ದು ಭಾಷೆಯಲ್ಲಿ ಹೇಳಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

