ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದನ್ನು ಪ್ರೂವ್ ಮಾಡೋದಾಗಿ ರಾಹುಲ್ ಹೇಳಿದ್ದಾರೆ: ಪರಮೇಶ್ವರ್
ಬೆಂಗಳೂರು ಕಾಲ್ತುಳಿತ ಘಟನೆಯ ತನಿಖೆಯನ್ನು ನಡೆಸಿದ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ವರದಿಯನ್ನು ಸರ್ಕಾರ ಅಂಗೀಕರಿಸಿದೆ ಮತ್ತು ವರದಿಯಲ್ಲಿ ಮಾಡಲಾಗಿರುವ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಪರಮೇಶ್ವರ್ ಹೇಳಿದರು. ಆರ್ಸಿಬಿ, ಕೆಎಸ್ಸಿಎ ಮತ್ತಿ ಡಿಎನ್ಎ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ನಿನ್ನೆ ಸಚಿವ ಸಂಪುಟ ನಿರ್ಧರಿಸಿದೆ.
ಬೆಂಗಳೂರು, ಜುಲೈ 25: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Lok Sabha Polls) ನಡೆಯುವ ವೇಳೆ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಉತ್ತರ ನೀಡಿದ ಗೃಹ ಸಚಿವ ಜಿ ಪರಮೇಶ್ವರ್, ವಿಷಯದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈಗಾಗಲೇ ಪ್ರತಿಕ್ರಿಯಿಸಿದ್ದಾರೆ ಎಂದರು. ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಮತ್ತು ಅಕ್ರಮ ನಡೆದಿರುವುದನ್ನು ತಾನು ಸಾಕ್ಷಿ ಸಮೇತ ಪ್ರೂವ್ ಮಾಡೋದಾಗಿಯೂ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಹೇಳಿರುವುದರಿಂದ ಕಾದು ನೋಡಬೇಕಾದ ಅವಶ್ಯಕತೆಯಿದೆ ಎಂದು ಪರಮೇಶ್ವರ್ ಹೇಳಿದರು.
ಇದನ್ನೂ ಓದಿ: ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ; ಪ್ರತೀಕಾರದ ರಾಜಕಾರಣ ಅಲ್ಲವೆಂದ ಸಚಿವ ಪರಮೇಶ್ವರ್
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ