ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿರುವುದನ್ನು ಪ್ರೂವ್ ಮಾಡೋದಾಗಿ ರಾಹುಲ್ ಹೇಳಿದ್ದಾರೆ: ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 25, 2025 | 12:32 PM

ಬೆಂಗಳೂರು ಕಾಲ್ತುಳಿತ ಘಟನೆಯ ತನಿಖೆಯನ್ನು ನಡೆಸಿದ ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ವರದಿಯನ್ನು ಸರ್ಕಾರ ಅಂಗೀಕರಿಸಿದೆ ಮತ್ತು ವರದಿಯಲ್ಲಿ ಮಾಡಲಾಗಿರುವ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಪರಮೇಶ್ವರ್ ಹೇಳಿದರು. ಆರ್​ಸಿಬಿ, ಕೆಎಸ್​ಸಿಎ ಮತ್ತಿ ಡಿಎನ್​ಎ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ನಿನ್ನೆ ಸಚಿವ ಸಂಪುಟ ನಿರ್ಧರಿಸಿದೆ.

ಬೆಂಗಳೂರು, ಜುಲೈ 25: ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Lok Sabha Polls) ನಡೆಯುವ ವೇಳೆ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿರುವ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಉತ್ತರ ನೀಡಿದ ಗೃಹ ಸಚಿವ ಜಿ ಪರಮೇಶ್ವರ್, ವಿಷಯದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈಗಾಗಲೇ ಪ್ರತಿಕ್ರಿಯಿಸಿದ್ದಾರೆ ಎಂದರು. ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಮತ್ತು ಅಕ್ರಮ ನಡೆದಿರುವುದನ್ನು ತಾನು ಸಾಕ್ಷಿ ಸಮೇತ ಪ್ರೂವ್ ಮಾಡೋದಾಗಿಯೂ ರಾಹುಲ್ ಗಾಂಧಿ ಚುನಾವಣಾ ಆಯೋಗಕ್ಕೆ ಹೇಳಿರುವುದರಿಂದ ಕಾದು ನೋಡಬೇಕಾದ ಅವಶ್ಯಕತೆಯಿದೆ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ:   ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ; ಪ್ರತೀಕಾರದ ರಾಜಕಾರಣ ಅಲ್ಲವೆಂದ ಸಚಿವ ಪರಮೇಶ್ವರ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.