ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಚುನಾವಣಾ ಆಯೋಗಕ್ಕೆ ಧನ್ಯವಾದ: ರಾಹುಲ್ ವ್ಯಂಗ್ಯ
ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದು, ಕೇಂದ್ರ ಚುನಾವಣಾ ಆಯೋಗದ ವಿರುದ್ಧದ ತಮ್ಮ ರಣಕಹಳೆ ಮುಂದುವರೆಸಿದ್ದಾರೆ. ಇನ್ನು ಬಿಹಾರ ಮೂಲದ ಏಳು ಮತದಾರರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು, ಈ ವೇಳೆ ತಮ್ಮನ್ನು ಮೃತಪಟ್ಟಿದ್ದಾರೆಂದು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ನವದೆಹಲಿ, (ಆಗಸ್ಟ್ 13): ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ್ದು, ಕೇಂದ್ರ ಚುನಾವಣಾ ಆಯೋಗದ ವಿರುದ್ಧದ ತಮ್ಮ ರಣಕಹಳೆ ಮುಂದುವರೆಸಿದ್ದಾರೆ. ಇನ್ನು ಬಿಹಾರ ಮೂಲದ ಏಳು ಮತದಾರರು ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದು, ಈ ವೇಳೆ ತಮ್ಮನ್ನು ಮೃತಪಟ್ಟಿದ್ದಾರೆಂದು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನು ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ವಿಡಿಯೋ ಹಾಕಿಕೊಂಡಿದ್ದು.ನನಗೆ ಜೀವನದಲ್ಲಿ ಅನೇಕ ಆಸಕ್ತಿದಾಯಕ ಅನುಭವಗಳಾಗಿವೆ. ಆದ್ರೆ, ಸತ್ತವರ ಜೊತೆ ಟೀ ಕುಡಿಯುವ ಅನುಭವವಾಗಿರಲಿಲ್ಲ. ಈ ವಿಶೇಷ ಘಟನೆಗೆ ಕಾರಣವಾದ ಚುನಾವಣಾ ಆಯೋಗಕ್ಕೆ ಧನ್ಯವಾದ ಎಂದು ಟಾಂಕ್ ಕೊಟ್ಟಿದ್ದಾರೆ.