ರಾಷ್ಟ್ರದಲ್ಲಿ ತಾಂಡವಾಡುತ್ತಿರುವ ಜ್ವಲಂತ ಸಮಸ್ಯೆಗಳ ವಿರುದ್ಧ ರಾಹುಲ್ ಗಾಂಧಿ ಭಾರತ ಜೋಡೋ ಯಾತ್ರೆ ಕೈಗೆತ್ತಿಕೊಂಡಿದ್ದಾರೆ: ಶಿವಕುಮಾರ
ನಾಡಿನ ಜನ ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ಶಿವಕುಮಾರ ಹೇಳಿದರು
ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ (Rahul Gandhi ) ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ (Bharat Jodo Yatra) ಭಾಗವಾಗಿ ಆಯೋಜಿಸಲಾದ ಸಾರ್ವಜನಿಕ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಅವರು ಆವೇಶದಲ್ಲಿ ಮಾತಾಡಿದರು. ದೇಶದಲ್ಲಿ ತಲೆದೋರಿರುವ ಭ್ರಷ್ಟಾಚಾರ, ನಿರುದ್ಯೋಗ, ಬೆಲೆಯೇರಿಕೆ, ರೈತರು ಎದುರಿಸುತ್ತಿರುವ ಸಮಸ್ಯೆ-ಮೊದಲಾದವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
Latest Videos