Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ ಚಾಲನೆ, 1.2 ಕೋಟಿ ಗೃಹಿಣಿಯರ ಖಾತೆಗಳಿಗೆ ತಲಾ ರೂ. 2,000 ಡಿಬಿಟಿ ಮೂಲಕ ಜಮಾ!

ಮೈಸೂರು: ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ ಚಾಲನೆ, 1.2 ಕೋಟಿ ಗೃಹಿಣಿಯರ ಖಾತೆಗಳಿಗೆ ತಲಾ ರೂ. 2,000 ಡಿಬಿಟಿ ಮೂಲಕ ಜಮಾ!

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 30, 2023 | 4:41 PM

ರಾಹುಲ್ ಅವರೊಂದಿಗೆ ಖರ್ಗೆಯಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಗೃಹ ಸಚಿವ ಜಿ ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಸೇರಿದಂತೆ ಇನ್ನೂ ಹಲವರು ಹಾಜರಿದ್ದರು.

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಕಾಂಗ್ರೆಸ್ ನಾಯಕ ಮತ್ತ್ತು ಸಂಸದ ರಾಹುಲ್ ಗಾಂಧಿ (Rahil Gandhi) ಇಂದು ವಿದ್ಯುಕ್ತ ಚಾಲನೆ ನೀಡಿದರು. ಅವರು ಲ್ಯಾಪ್ ಟ್ಯಾಪ್ ಕೀಯೊಂದನ್ನು ಅದುಮುತ್ತಿದ್ದಂತೆಯೇ ರಾಜ್ಯದ ಸುಮಾರು 1.2 ಕೋಟಿ ಗೃಹಿಣಿಯರ ಬ್ಯಾಂಕ್ ಖಾತೆಗಳಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ ಫರ್ (Direct Benefit Transfer) ವ್ಯವಸ್ಥೆ ಮೂಲಕ ರೂ. 2,000 ಜಮಾಗೊಂಡಿತು. ಸಾವಿರಾರು ಫಲಾನುಭವಿ ಮಹಿಳೆಯರು ಸಂತಸ ವ್ಯಕ್ತಪಡಿಸುತ್ತಾ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಅದಕ್ಕೂ ಮೊದಲು ರಾಹುಲ್ ಮತ್ತು ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸಿದ್ದರಾಮಯ್ಯ ಸರ್ಕಾರದ 100 ದಿನಗಳ ಸಾಧನೆಗಳನ್ನು ಹೇಳುವ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ಹೊತ್ತಿಗೆಯೊಂದನ್ನು ಬಿಡುಗಡೆ ಮಾಡಿದರು. ವೇದಿಕೆ ಮೇಲೆ ಬಹಳ ಸಂತಸದಿಂದಿದ್ದ ರಾಹುಲ್ ಮುಖದಲ್ಲಿ ಲವಲವಿಕೆ ಎದ್ದು ಕಾಣುತಿತ್ತು. ಈ ಸಂದರ್ಭದಲ್ಲಿ ಅವರೊಂದಿಗೆ ಖರ್ಗೆಯಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಗೃಹ ಸಚಿವ ಜಿ ಪರಮೇಶ್ವರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಸೇರಿದಂತೆ ಇನ್ನೂ ಹಲವರು ಹಾಜರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ