ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ ವ್ಯಂಗ್ಯ
ನನಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಮುಂದುವರಿಯುವ ವಿಶ್ವಾಸವಿದೆ ಎಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ನಿಂದ ಸ್ಪಷ್ಟತೆ ಸಿಗುತ್ತದೆ ಎಂಬ ವಿಶ್ವಾಸವಿದೆ. ನನಗಂತೂ ಸ್ಪಷ್ಟತೆ ಸಿಕ್ಕಿದೆ. ನಾನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ ಎಂದ ವಿಜಯೇಂದ್ರ ಪರೋಕ್ಷವಾಗಿ ತಾವೇ ಮುಂದುವರಿಯುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು, ನವೆಂಬರ್ 15: ಬಿಹಾರದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಅನುಭವಿಸಿದೆ. ಇದುವರೆಗೆ ರಾಹುಲ್ ಗಾಂಧಿ 95 ಚುನಾವಣೆಗಳನ್ನು ಸೋತಿದ್ದಾರೆಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಹುಲ್ ಗಾಂಧಿಯದು ಐರನ್ ಲೆಗ್ ಅನ್ನೋದು ಸಾಬೀತಾಗಿದೆ. ಅವರು ಎಲ್ಲಿ ಕಾಲಿಡ್ತಾರೆಯೋ ಅಲ್ಲಿ ಅವರ ಪಕ್ಷ ಉದ್ಧಾರ ಆಗಲ್ಲ. ಇದಕ್ಕೆ ನಿನ್ನೆ ಬಂದ ಬಿಹಾರದ ಫಲಿತಾಂಶವೇ ಸ್ಪಷ್ಟ ಉದಾಹರಣೆಯಾಗಿದೆ. ಹಾಗಾಗಿ, ರಾಹುಲ್ ಗಾಂಧಿ ದೇಶದಿಂದ ಮಾಯವಾಗಿದ್ದಾರೆ. ಬಿಜೆಪಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವುದನ್ನು ನೋಡಿ ಅವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೇ ದೇಶದಲ್ಲಿ ದೇಶದ ಹೊರಗೆ ಭಾರತ ವಿರೋಧಿ, ಬಿಜೆಪಿ ವಿರೋಧಿ ಹೇಳಿಕೆ ಕೊಡುತ್ತಾರೆ ಎಂದು ಟೀಕಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
